ಶಾಸಕ ಕೃಷ್ಣನಾಯಕ ಜನ್ಮದಿನ : ಬೃಹತ್ ಉದ್ಯೋಗ ಮೇಳ ಜೂ.2
MLA Krishnanayak's birthday: Huge job fair June 2
ಲೋಕದರ್ಶನ ವರದಿ
ಹೂವಿನಹಡಗಲಿ 20 : ಶಾಸಕ ಕೃಷ್ಣನಾಯ್ಕ ಅವರ ಜನ್ಮದಿನ ಹಿನ್ನೆಲೆಯಲ್ಲಿ ಜೂನ್ 2ರಂದು ಶಾಸಕರ ಆಯೋಜನೆಯಲ್ಲಿ ಪಟ್ಟಣದ ಜಿಬಿಆರ್. ಕಾಲೇಜಿನಲ್ಲಿ ಯುವಕ,ಯುವತಿಯರು ಮತ್ತು ಮಹಿಳೆಯರಿಗಾಗಿ ಬೃಹತ್ ಉದ್ಯೋಗ ಮೇಳ-26 ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕೃಷ್ಣನಾಯಕ ಹೇಳಿದರು.ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿ ಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮತಕ್ಷೇತ್ರದ ಉದ್ಯೋಗಾವಕಾಶ ವಂಚಿತ ಯುವಕ ಯುವತಿಯರಿಗೆ ಸಹಾಯ ಮಾಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ನಮ್ಮ ಭಾಗದ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಮಹಿಳಾ ಮತ್ತು ಯುವ ಉದ್ಯಮಿ ಕಾರ್ಯಕ್ರಮದಡಿ ಮಹಿಳಾ ಸಬಲೀಕರಣ, ಯುವ ಉದ್ಯೋಗ ಮತ್ತು ಸ್ವಯಂ ಉದ್ಯೋಗ ತರಬೇತಿಗೆ ಇಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು.
ಕೌಶಲ್ಯಾಭಿವೃದ್ಧಿ, ಸ್ಟಾರ್ಟ್ ಅಪ್ ಹಾಗೂ ಸಣ್ಣ ಉದ್ಯಮಗಳ ಸ್ಥಾಪನೆಗೆ ಉತ್ತೇಜನ ನೀಡಲು 100ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಭಾಗವಹಿಸುತ್ತಿವೆ ಎಂದರು.ಅಂದು ಮಹಿಳೆಯರಿಗಾಗಿ ಪಟ್ಟಣದ ಎಂ.ಪಿ.ರುದ್ರಾಂಬ ಪ್ರಕಾಶ ಪದವಿ ಕಾಲೇಜಿನಲ್ಲಿ ವಿಶೇಷವಾಗಿ ಮಹಿಳೆಯರಿಗೆ ಗೃಹ ಹಾಗೂ ಗುಡಿ ಕೈಗಾರಿಕೆಗಳ ಮೂಲಕ ತಯಾರಿಸಿದ ವಸ್ತುಗಳ ಮಾರಾಟ ಮಾಡುವ ಬಗ್ಗೆ, ಉತ್ಪನ್ನಗಳ ರಫ್ತು ಮಾಡುವ ಬಗ್ಗೆ, ಕಡಿಮೆ ಬಂಡವಾಳದಲ್ಲಿ ಸ್ಟಾರ್ಟ್ ಅಪ್ ತೆರೆಯುವ ಬಗ್ಗೆ, ಉದ್ಯಮಗಳ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ನುರಿತ ತಜ್ಞರು ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.ಇದೇ ವೇಳೆ ಬಿಜೆಪಿ ಅದ್ಯಕ್ಷ ಮಲ್ಲಿಕಾರ್ಜುನ ಪೂಜಾರ, ಜಿಲ್ಲಾ ಉಪಾಧ್ಯಕ್ಷ ಹಣ್ಣಿ ಶಶಿಧರ, ಮುಖಂಡರಾದ ವಾರದ ಗೌಸ್ ಮೊಹಿದ್ದೀನ್, ಸೊಪ್ಪಿನ ಮಂಜುನಾಥ, ಹೆಚ್.ಪೂಜಪ್ಪ, ಸಿ.ಮೋಹನ್ ರೆಡ್ಡಿ, ತಳವಾರ ಮಹಾಂತೇಶ ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 