ನಿರ್ಮಾಣ ಹಂತದ ಆಸ್ಪತ್ರೆ ಕಾಮಗಾರಿಯನ್ನು ಪರೀಶೀಲಿಸಿದ ಶಾಸಕ ಲಕ್ಷ್ಮಣ ಸವದಿ
MLA Lakshman Savadi inspects hospital construction work
ಅಥಣಿ 19 : ಅಥಣಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂದಾಜು 21 ಕೋಟಿ ಮೊತ್ತದ ತಾಯಿ-ಮಕ್ಕಳ 100 ಹಾಸಿಗೆಯಳ್ಳ ತಾಯಿ ಮಕ್ಕಳ ಆಸ್ಪತ್ರೆ ಕಾಮಗಾರಿ ಸ್ಥಳಕ್ಕೆ ಶಾಸಕ ಲಕ್ಷ್ಮಣ ಸವದಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಗುತ್ತಿಗೆದಾರರಿಂದ ಮಾಹಿತಿ ಪಡೆದುಕೊಂಡು ಕಾಮಗಾರಿಯ ಗುಣಮಟ್ಟ ಪರೀಶೀಲಿಸಿದರು. ಗುಣ ಮಟ್ಟವನ್ನು ಕಾಯ್ದುಕೊಳ್ಳಬೇಕು, ಕಾಮಗಾರಿಯಲ್ಲಿ ಲೋಪ, ದೋಷಗಳು ಕಂಡು ಬರದಂತೆ ನಿರ್ವಹಿಸಿ ಎಂದು ಗುತ್ತಿಗೆದಾರನಿಗೆ ಸೂಚಿಸಿದ ಶಾಸಕರು ನಿಗದಿತ ಅವಧಿಯೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಶಾಸಕ ಲಕ್ಷ್ಮಣ ಸವದಿ ಸೂಚಿಸಿದರು. ಈ ಸಂದರ್ಭದಲ್ಲಿ ತಾಲೂಕಾ ವೈದ್ಯಾಧಿಕಾರಿ ಡಾ.ಬಸವರಾಜ ಕಾಗೆ, ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ, ಮಾಜಿ ಅಧ್ಯಕ್ಷ ರಾಮ ಧರಿಗೌಡ, ಪ್ರಥಮ ದರ್ಜೆ ಗುತ್ತಿಗೆದಾರ ಶಿವರುದ್ರ ಘೂಳಪ್ಪನವರ, ರಾಜು ಅಲಬಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 