ಕಾರ್ಮಿಕರಿಗೆ ಕಿಟ್ ವಿತರಿಸಿದ ಶಾಸಕ ಲಮಾಣಿ
MLA Lamani distributes kits to workers
ಲಕ್ಷ್ಮೇಶ್ವರ 06: ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ನಿರ್ಮಾಣ ಕಾರ್ಮಿಕರಿಗೂ ಸಹ ಕಾರ್ಮಿಕ ಇಲಾಖೆಯಿಂದ ಹಲವಾರು ಯೋಜನೆಗಳಿದ್ದು ಅವುಗಳ ಸದುಪಯೋಗವನ್ನು ಪಡೆದುಕೊಂಡು ಎಲ್ಲ ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ಎಲ್ಲ ಕಾರ್ಮಿಕರು ತಮ್ಮ ಬದುಕನ್ನು ಉಜ್ವಲ ಗೊಳಿಸಿಕೊಳ್ಳಬೇಕು ಎಂದುಶಾಸಕ ಡಾ ಚಂದ್ರು ಲಮಾಣಿ ಹೇಳಿದರು. ಅವರು ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದ ಸಭಾಭವನದಲ್ಲಿ ಬುಧುವಾರ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸಲಕರಣೆಗಳ ಪ್ರತಿರಕ್ಷಣಾ ಕಿಟ್ಟು ವಿತರಿಸಿ ಅವರು ಕಾರ್ಮಿಕರಿಗೆ ಸಲಹೆ ನೀಡಿದರು.
ಇದೇ ಸಮಯದಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರ ಸಂಘದಿಂದ ಶಾಸಕರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಮಾತನಾಡಿ ಸರ್ಕಾರ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸಲಕರಣೆಗಳ ಕಿಟ್ಟುಗಳನ್ನು ವಿತರಿಸುವುದ ರೊಂದಿಗೆ ಇನ್ನು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳನ್ನು ಎಲ್ಲ ಕಟ್ಟಡ ಕಾರ್ಮಿಕರು ಪ್ರಯೋಜನ ಪಡೆದು ಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರು ಸದಸ್ಯರು ಕಾರ್ಮಿಕರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 