ಕರ್ಜಗಿಯಲ್ಲಿ ಬಾಲಕರ ವಸತಿ ನಿಲಯ ಉದ್ಘಾಟಿಸಿದ ಶಾಸಕ ಲಮಾಣಿ
MLA Lamani inaugurated a boys' hostel in Karjagi
ಹಾವೇರಿ 17: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ವಸತಿ ನಿಲಯಗಳ ಸಂಖ್ಯೆ ಹೆಚ್ಚಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ದೇಶಕ್ಕೆ ಉತ್ತಮ ಪ್ರಜೆಗಳಾಗಬೇಕೆಂದು ವಿಧಾನಸಭೆ ಉಪಾಧ್ಯಕ್ಷ, ಶಾಸಕ ರುದ್ರ್ಪ ಲಮಾಣಿ ಹೇಳಿದರು.
ಕರ್ಜಗಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಾಲಕರ ವಸತಿ ನಿಲಯ ನಂ.3ರ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಆರೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡ ಉದ್ಘಾಟನೆಗೊಂಡಿದೆ. ವಿಶಾಲವಾದ ಮೈದಾನ, ಲಿಫ್ಟ್, ವ್ಯವಸ್ಥಿತ ಕಟ್ಟಡ ನಿರ್ಮಾಣವಾಗಿರುವುದು ಹೆಮ್ಮೆ ಮೂಡಿಸಿದೆ. ವಿದ್ಯಾರ್ಥಿಗಳು ತಮ್ಮ ಮನೆಯನ್ನು ಸುವ್ಯವಸ್ಥಿತವಾಗಿ ನೋಡಿಕೊಂಡಂತೆ ಇದನ್ನು ನೋಡಿಕೊಳ್ಳಬೇಕು. ಜೊತೆಗೆ ಹೆತ್ತವರ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸು ನನಸು ಮಾಡಬೇಕು ಎಂದು ಸಲಹೆ ನೀಡಿದರು.
ಸಂಜೀವಕುಮಾರ ನೀರಲಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ನಾಲ್ಕು ಬಿಸಿಎಂ ಜೊತೆಗೆ ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ನೂತನ ವಸತಿ ನಿಲಯ ಸ್ಥಾಪನೆಗೆ ಶ್ರಮಿಸಿರುವರು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆಂಜನೇಯ ಮಾತನಾಡಿ ಶಿಕ್ಷಣಕ್ಕೆ ಮೂಲ ಸೌಕರ್ಯ ಒದಗಿಸುವ ಕಾರಣಕ್ಕೆ ಮೆಟ್ರಿಕ್ ನಂತರದ ನೂರು ವಿದ್ಯಾರ್ಥಿಗಳಿಗೆ ವಸತಿ ನಿಲಯ ಉದ್ಘಾಟನೆಗೊಂಡಿದೆ ಎಂದರು.
ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮಂತ್ ಹದಗಲ್, ಮುಖಂಡರಾದ ಎಂ.ಎಂ.ಮೈದೂರ, ಸಿದ್ದಣ್ಣ ಕುಲಕರ್ಣಿ,ಅಧಿಕಾರಿಗಳಾದ ಎನ್.ಎನ್. ಪಾಟೀಲ, ವಾಸು ಲಮಾಣಿ,ಎಸ್.ಎಂ.ಮೇಗಳಮನಿ,ಸಲೀಂ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಗುತ್ತಿಗೆದಾರ ಬಿ.ಎಸ್.ಆರ್ ಸಂತೋಷ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 