ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಾನೆ ಭೂಮಿಪೂಜೆ
MLA Mane Bhumipuja for road development work
ಹಾನಗಲ್ 13: ತಾಲೂಕಿನ ಮಾರನಬೀಡ ಗ್ರಾಮದಲ್ಲಿ ರೂ. 30 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
2023-24 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ಗ್ರಾಮದ ಶಿವಭಾರದಿಂದ ಧರ್ಮಾ ನದಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮಾನೆ ಶ್ರೀನಿವಾಸ, ತಾಲೂಕಿಗೆ ರೂ. 50 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಪ್ರತಿಯೊಂದು ಗ್ರಾಮಗಳಲ್ಲಿಯೂ ಸಹ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಶೀಘ್ರ ಕಾಮಗಾರಿಗಳೆಲ್ಲ ಚಾಲನೆ ಪಡೆಯಲಿವೆ. ರಸ್ತೆ, ಕುಡಿಯುವ ನೀರು, ವಿದ್ಯುತ್ ಪೂರೈಕೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಗಮನ ನೀಡಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಕುಂದು, ಕೊರತೆಗಳನ್ನು ಶ್ರೀನಿವಾಸ ಮಾನೆ ಆಲಿಸಿದರು.ಗ್ರಾಪಂ ಅಧ್ಯಕ್ಷ ಈರ್ಪ ಜಾಡರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ನಗೀನಾಬಾನು ಹರವಿ, ಬಗರ್ ಹುಕುಂ ಸಾಗುವಳಿ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ ಜಮಾದಾರ, ಮುಖಂಡರಾದ ಮಂಜಣ್ಣ ಹರ್ಲಾಪೂರ, ಹನುಮಂತಪ್ಪ ಡುಮ್ಮನವರ, ಯಲ್ಲಪ್ಪ ಹಾನಗಲ್, ಬಸವರಾಜ ಖೇಮಾಜಿ, ಮಲ್ಲೇಶಪ್ಪ ಕರೆಪ್ಪನವರ, ಎಂ.ಎ.ನೆಗಳೂರ, ಗನಿ ಪಟೇಲ್,ಬಸನಗೌಡ ಪಾಟೀಲ, ಚಮನಸಾಬ ಪಠಾಣ, ಬಸವರಾಜ ಹೊಸಮನಿ, ಪ್ರಕಾಶ ಕೋಳೂರ ಸೇರಿದಂತೆ ಇನ್ನೂ ಹಲವರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 