ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ನಾಡಗೌಡ ಚಾಲನೆ
MLA Nad Gowda drive for road development work
ತಾಳಿಕೋಟಿ 22: ತಾಲೂಕಿನ ಕೊಣ್ಣೂರ ಗ್ರಾಮದ ಮುಖ್ಯರಸ್ತೆಯಿಂದ ಹೂವಿನ ಹಿಪ್ಪರಗಿಗೆ ಸಂಪರ್ಕ ಕಲ್ಪಿಸುವ ಕೆ ಆರ್ ಐ ಡಿ ಎಲ್ ಇಲಾಖೆ ವ್ಯಾಪ್ತಿಯ ರೂ 350 ಲಕ್ಷ ಮೊತ್ತದ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಶನಿವಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮತಕ್ಷೇತ್ರ ವ್ಯಾಪ್ತಿಗೆ ಎಲ್ಲಾ ಗ್ರಾಮಗಳಿಗೆ ಅಗತ್ಯವಿದ್ದಲ್ಲಿ ರಸ್ತೆಗಳ ಸುಧಾರಣೆಗೆ ಆದ್ಯತೆ ಕೊಟ್ಟು ಕೆಲಸ ಮಾಡುತ್ತಿದ್ದೇನೆ ಇವತ್ತು ಇಲ್ಲಿ ರೂ 3.50 ಕೋಟಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದೇನೆ ಇದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿತ್ತು ಸದರಿ ರಸ್ತೆಯ ಕಾಮಗಾರಿ ಗುಣಮಟ್ಟದಾಗಿರುವಂತೆ ನೋಡಿಕೊಳ್ಳಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.
ವೇದ ಮೂರ್ತಿ ಶ್ರೀನಾಥ ಹಿರೇಮಠ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಅಧ್ಯಕ್ಷೆ ಬಸ್ಸಮ್ಮ ಮಾದರ, ಪಿಡಿಓ ಸಾವಿತ್ರಿ ಬಿರಾದಾರ,ತಾಪಂ ಸಹಾಯಕ ನಿರ್ದೇಶಕಿ ಸುಜಾತಾ ಯಡ್ರಾಮಿ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ,ಶರಣುಭೂಪಾಲ ದೇಶಮುಖ, ಪ್ರಕಾಶ ಪಾಟೀಲ, ಸಂಗನಗೌಡ ದೇಸಾಯಿ, ಸಂಗನಗೌಡ ಅಸ್ಕಿ, ವೀರೇಶಗೌಡ ಅಸ್ಕಿ ಎಇಇ ಆನಂದ ಸ್ವಾಮಿ,ಜೆಇ ಸಚಿನ್ ಮುಗಳಿ,ಸಾಹೇಬಗೌಡ ಬಿರಾದಾರ, ಗ್ರಾಪಂ ಸದಸ್ಯರು, ಗಣ್ಯರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 