ಕೊಣ್ಣೂರ ಚಿನ್ಮಾಯೇಶ್ವರ ದೇವಸ್ಥಾನದಲ್ಲಿ ಜನಸಂಪರ್ಕ ಸಭೆ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿದ ಶಾಸಕ ನಾಡಗೌಡ
MLA Nad Gowda responded to the public's problem in a public relations meeting at the Konnur Chinmaye
ತಾಳಿಕೋಟಿ 22: ಜೆಜೆಎಂ ಕಾಮಗಾರಿ ಅಸಮರ್ಕವಾಗಿದೆ, ಕಳಪೆ ಗುಣಮಟ್ಟದಿಂದ ಕೂಡಿದೆ ಅನೇಕ ಕಡೆ ಸಂಪರ್ಕ ಕಲ್ಪಿಸಿದ ನಳಗಳಿಂದ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ ಈ ಕುರಿತು ಅಧಿಕಾರಿಗಳು ಸಂಬಂಧಿಸಿದ ಗುತ್ತಿಗೆದಾರರನ್ನು ಕರೆಸಿ ಪರೀಶೀಲನೆ ನಡೆಸಬೇಕು ಅವರ ಅಂತಿಮ ಬಿಲ್ ತಡೆಯುವಂತೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ತಪ್ಪು ಮಾಡಿದ್ದು ಸಾಬೀತು ಆದರೆ ಅವರ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಶಾಸಕ, ಕೆ ಎಸ್ ಡಿ ಎಲ್ ಅಧ್ಯಕ್ಷ ಸಿ.ಎಸ್. ನಾಡಗೌಡ (ಅಪ್ಪಾಜಿ) ಅಧಿಕಾರಿಗಳಿಗೆ ಸೂಚಿಸಿದರು.
ಕೊಣ್ಣೂರ ಗ್ರಾಮದ ಚಿನ್ಮಾಯೇಶ್ವರ ದೇವಸ್ಥಾನದಲ್ಲಿ ಕೊಣ್ಣೂರ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳ ಜನರ ಅಹವಾಲು ಆಲಿಕೆ, ಜನ ಸಂಪರ್ಕ ಸಭೆ ನಡೆಸಿ ಅವರು ಮಾತನಾಡಿದರು. ರೈತರಿಗೆ ಸರಿಯಾಗಿ ಬೆಳೆ ವಿಮೆ ಬರುತ್ತಿಲ್ಲ ಇದರಲ್ಲಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ರೈತರು ಕೇಳಿದ ಪ್ರಶ್ನೆಗೆ ಶಾಸಕರು ಈ ಸಮಸ್ಯೆ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುತ್ತೇನೆ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಇದೆ ಎಂದರು. ಕೊಣ್ಣೂರ ಕ್ರಾಸ್ ದಿಂದ ಗ್ರಾಮದ ಒಳಗೆ ಬರಲು ಬಸ್ ಗಳ ಸೌಲಭ್ಯ, ವಸತಿ ಯೋಜನೆ ಫಲಾನುಭವಿಗಳ ಸರಿಯಾದ ಆಯ್ಕೆ, ಸ್ಥಳೀಯ ಆರೋಗ್ಯ ಕೇಂದ್ರದಲ್ಲಿರುವ ಸಮಸ್ಯೆಗಳ ಪರಿಹಾರ, ಇನ್ನೂ ಎರಡು ಅಂಗನವಾಡಿ ಕೇಂದ್ರಗಳನ್ನು ಹೆಚ್ಚಿಸುವುದು,
ಅಸಮರ್ಕ ವಿದ್ಯುತ್ ಪೂರೈಕೆ ಸರಿಪಡಿಸುವುದು, ಗ್ರಾಮದ ಚಿನ್ಮಯ ಶಾಲೆಯ ಮುಂದಿನ ರಸ್ತೆ ಸರಿಪಡಿಸಿ ಅಲ್ಲಿ ಅಡಿಗೆ ಕೋಣೆ ನಿರ್ಮಾಣ ಮಾಡಿಕೊಡುವುದು ಹೀಗೆ ಹತ್ತು ಹಲವು ಸಮಸ್ಯೆ ಹಾಗೂ ಬೇಡಿಕೆಗಳನ್ನು ಗ್ರಾಮಸ್ಥರು ಶಾಸಕರ ಮುಂದೆ ಮಂಡಿಸಿದರು. ಸಾರ್ವಜನಿಕರ ಎಲ್ಲ ಅಹವಾಲುಗಳನ್ನು ಶಾಂತ ಚಿತ್ತದಿಂದ ಆಲಿಸಿದ ಶಾಸಕರು ಇದಕ್ಕೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಸೂಚನೆ ಹಾಗೂ ಮಾರ್ಗದರ್ಶನ ನೀಡಿ ಆದಷ್ಟು ಬೇಗ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಆದೇಶಿಸಿದರು.ವೇ.ಮೂ. ಶ್ರೀನಾಥ ಹಿರೇಮಠ,ತಹಸಿಲ್ದಾರ್ ಡಾ. ವಿನಯಾ ಹೂಗಾರ, ತಾಪಂ ಇಓ ನಿಂಗಪ್ಪ ಮಸಳಿ,ಗ್ರಾಮ ಅಧ್ಯಕ್ಷೆ ಬಸ್ಸಮ್ಮ ಮಾದರ, ಪಿಡಿಒ ಸಾವಿತ್ರಿ ಬಿರಾದಾರ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ,ಬಸನಗೌಡ ಹಡಲಗೇರಿ,ಮುಖಂಡ ಸಿ.ಬಿ.ಅಸ್ಕಿ, ಶರಣುಭೂಪಾಲ ದೇಶಮುಖ,ಸಂಗನಗೌಡ ಅಸ್ಕಿ, ತಾಲೂಕ ಮಟ್ಟದ ಅಧಿಕಾರಿಗಳು,ಗ್ರಾಪಂ ಸದಸ್ಯರು,ತಾಪಂ ಸಿಬ್ಬಂದಿಗಳು, ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳ ಜನರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 