ಲಿಂಗೈಕ್ಯೆ ಬಸವಪ್ರಭು ದೇವರು ಮನೆಗೆ ಶಾಸಕ ನಾಡಗೌಡ ಭೇಟಿ
MLA Nadagowda visits the house of Lingayekye Basavaprabhu Dev
ತಾಳಿಕೋಟಿ 16: ಪಟ್ಟಣದ ಕೈಲಾಸ ಪೇಟೆಯ ಬಸವಪ್ರಭು ದೇವರು ಬುಧವಾರ ಲಿಂಗೈಕ್ಯೆರಾದ ಹಿನ್ನೆಲೆಯಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡರು ಭೇಟಿ ನೀಡಿದರು. ಶುಕ್ರವಾರ ಪಟ್ಟಣದ ಕೈಲಾಸ ಪೇಟೆಯಲ್ಲಿರುವ ಶ್ರೀಗಳ ಮನೆಗೆ ಭೇಟಿ ನೀಡಿದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ನಂತರ ಮಾತನಾಡಿದ ಅವರು ಬಸವಪ್ರಭು ಶ್ರೀಗಳು ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರವಾದ ಸೇವೆಯನ್ನು ನೀಡಿದ್ದಾರೆ. ನೇರ ನುಡಿಯ, ಪ್ರಖರ ವಾಗ್ಮಿಗಳಾದ ಅವರು ಒಳ್ಳೆಯ ಪ್ರವಚನಕಾರರೂ ಆಗಿದ್ದು ಸರಳ ವ್ಯಕ್ತಿತ್ವ ರೂಡಿಸಿಕೊಂಡಿದ್ದರು. ಅವರ ಅಗಲಿಕೆ ಆಧ್ಯಾತ್ಮಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಮುಖಂಡರಾದ ಸಿದ್ದನಗೌಡ ಪಾಟೀಲ (ನಾವದಗಿ),ಪ್ರಭುಗೌಡ ಮದರಕಲ್ಲ, ಶ್ರೀಗಳ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 