ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದ ಶಾಸಕ ನೆಹರು ಓಲೇಕಾರ
ಹಾವೇರಿ:ಎ. 04: ಲಾಕ್ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕೊರತೆಯಾಗದಂತೆ ಕಾಮರ್ಿಕ ಇಲಾಖೆಯಿಂದ ಆಹಾರ ಸಾಮಗ್ರಿ ಪೊಟ್ಟಣಗಳ ವಿತರಣೆಯನ್ನು ಶಾಸಕರಾದ ನೆಹರು ಓಲೇಕಾರ ಅವರು ವಿತರಿಸಿದರು.
ನಗರಸಭೆ ಆವರಣದಲ್ಲಿ ಶನಿವಾರ ಬೆಳಿಗ್ಗೆ ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ ಹಾಗೂ ವಲಸೆ ಕಾಮರ್ಿಕರಿಗೆ ರೇಷನ್ ಕಿಟ್ಗಳನ್ನು ವಿತರಿಸಿದರು. ಹಾಗೂ ಕಾಮರ್ಿಕ ಇಲಾಖೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಕಾಮರ್ಿಕರಿಗೆ ಕೋವಿಡ್-19 ಸುರಕ್ಷಾ ಸಾಮಗ್ರಿಗಳಾದ ಸೋಪು, ಡೆಟಾಲ್ ಹ್ಯಾಂಡ್ ವಾಶ್, ಸ್ಯಾನಿಟೈಸರ್, ಮಾಸ್ಕ್ಗಳನ್ನೊಳಗೊಂಡ ಕಿಟ್ಗಳನ್ನು ವಿತರಿಸಲಾಯಿತು.
ಕಾಮರ್ಿಕರಿಗೆ ಜಾಗೃತಿಯ ಕರಪತ್ರಗಳನ್ನು ನೀಡಿ, ಸಾಮಾಜಿಕ ಅಂತರವವನ್ನು ಕಾಪಾಡಿಕೊಳ್ಳಿ, ಲಾಕ್ಡೌನ್ ಅವಧಿಯಲ್ಲಿ ಮನೆಯಿಂದ ಹೊರಹೋಗದಂತೆ ಮನವಿ ಮಾಡಿಕೊಳ್ಳಲಾಯಿತು. ಕುಟುಂಬದ ಯಾರೇ ವ್ಯಕ್ತಿಗಳಿಗೆ ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ, ಭೇಧಿ ಉಂಟಾದಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆಮಾಡಿಸಿಕೊಳ್ಳಿ. ವಯಕ್ತಿಕ ಸ್ವಚ್ಛತೆ ಹಾಗೂ ಸುರಕ್ಷತೆಯನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಕಾಮರ್ಿಕ ಅಧಿಕಾರಿ ಶ್ರೀಮತಿ ಕಲಾವತಿ ಸಾತೇನಹಳ್ಳಿ ಅವರು ಮಾತನಾಡಿ, ಪ್ರಸ್ತುತ 500 ಜನ ಕಾರ್ಮಿಕರನ್ನು ಗುರುತಿಸಲಾಗಿದೆ. ಪ್ರತಿ ಕಾಮರ್ಿಕರಿಗೆ 8 ಕೆ.ಜಿ. ಅಕ್ಕಿ, ತಲಾ ಒಂದು ಕೆ.ಜಿ. ಬೆಳೆ, ಎಣ್ಣೆ, ಗೋದಿ, ಉಪ್ಪು, ಈರುಳ್ಳಿ ಸೇರಿದಂತೆ ಆಹಾರ ಕಿಟ್ನ್ನು ವಿತರಿಸಲಾಗುತ್ತಿದೆ. ಜಿಲ್ಲೆಯ ಐದುಸಾವಿರ ಕಾರ್ಮಿಕರಿಗೆ ಕರೋನಾ ಸುರಕ್ಷತಾ ಕಿಟ್ಗಳನ್ನು ರೆಡ್ ಕ್ರಾಸ್ ಸಂಸ್ಥೆಯಿಂದ ವಿತರಿಸಲಾಗುತ್ತಿದೆ. ಕಾಮರ್ಿಕರಿಗೆ ಅಗತ್ಯಕ್ಕೆ ತಕ್ಕಂತೆ ಆಹಾರ ಕಿಟ್ಗಳ ವಿತರಣೆ ಹೆಚ್ಚಾಗಲಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷರಾದ ಬಸವರಾಜ ಅರಬಗೊಂಡ, ನಗರಸಭೆ ಸದಸ್ಯರಾದ ಗಿರೀಶ ತುಪ್ಪದ, ಬಾಬಣ್ಣ ಮೋಮಿನಗಾರ, ಜಗದೀಶ ಮಲಗೋಡ, ತಹಶೀಲ್ದಾರ ಶಂಕರ, ಪೌರಾಯುಕ್ತ ಬಸವರಾಜ ಜಿದ್ದಿ, ಪಶು ಸಂಗೋಪನಾ ಇಲಾಖೆ ಸಹಾಯಕ ನಿದರ್ೆಶಕ ಪರಮೇಶ್ವರ ಹುಬ್ಬಳ್ಳಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 