156 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಸಿದ ಶಾಸಕ ಪಠಾಣ
MLA Pathana distributed entitlement certificates to 156 beneficiaries
ಶಿಗ್ಗಾವಿ 19 : ಸೂರು ಇಲ್ಲದ ಕ್ಷೇತ್ರದಪ್ರತಿಯೊಬರಿಗೂ ಅತ್ಯುತ್ತಮ ಮನೆ ಕಟ್ಟಿಸಿಕೊಡುವ ಗುರಿ ಹೊಂದಿದ್ದೇನೆ. ಜನರ ಬೇಡಿಕೆಗೆ ಅನುಗುಣವಾಗಿ ಸಲ್ಲಿಸಿರುವ ತಮ್ಮ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ, ವಸತಿ ಸಚಿವರು 6 ಸಾವಿರ ಮನೆ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಶಾಸಕ ಯಾಸೀರಖಾನ್ ಪಠಾಣ ಹೇಳಿದರು.
ಪಟ್ಟಣದ ನೂತನ ವಾಜಪೇಯಿ ನಗರದಲ್ಲಿ ವಿಶೇಷ ವಸತಿ ಯೋಜನೆಯಡಿ ನಿರ್ಮಿಸಿದ ಜಿ+1 ಮನೆಗಳನ್ನು 156 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದ ಅವರು ಪಟ್ಟಣದ ಬಡವರು ತಮ್ಮ ಮನೆಗಳ ಹಕ್ಕು ಪತ್ರ ಪಡೆಯಲು ಹಲವು ವರ್ಷಗಳಿಂದ ಹೊರಾಟ ಮಾಡುತ್ತಿದ್ದರು. ಇಂದು ಅವರ ಹೋರಾಟಕ್ಕೆ ಜಯ ಲಭಿಸಿದೆ ಎಂದರು. ವಸತಿ ಯೋಜನೆಯಡಿ ಆಶ್ರಯ ಮನೆ ನಿರ್ಮಾಣಕ್ಕೆ ಸರಕಾರದಿಂದ 1.5ಲಕ್ಷ ಹಣ ಕೊಡುತ್ತಿದೆ. ಈ ಹಣದಲ್ಲಿ ಮನೆ ಕಟ್ಟಲು ಸಾಧ್ಯವಿಲ್ಲ. ಬಡವರಿಗೆ ಅನುಕೂಲವಾಗುವ ದೃಷ್ಟಿಯಿಂದ ಅನುದಾನವನ್ನು3 ಲಕ್ಷಕ್ಕೆ ಏರಿಕೆ ಮಾಡಬೇಕು ಎಂದು ಈಗಾಗಲೇ ವಸತಿ ಸಚಿವರು ಮತ್ತು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಮುಂದಿನ ಅಧಿವೇಶನದಲ್ಲಿ ವಸತಿ ಅನುದಾನವನ್ನು ಹೆಚ್ಚಿಸುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ, ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ, ಸದಸ್ಯರಾದ ಗೌಸಖಾನ ಮುನಶಿ, ಜಾಫರಖಾನ ಪಠಾಣ, ವಸಂತಾ ಬಾಗೂರ, ನಸ್ರೀನಬಾನು ತಿಮ್ಮಾಪೂರ, ರಮೇಶ ವನಹಳ್ಳಿ, ಪರುಶರಾಮ ಸೊನ್ನದ, ಮಂಜುನಾಥ ಬ್ಯಾಹಟ್ಟಿ, ರೂಪಾ ಬನ್ನಿಕೊಪ್ಪ, ಸಂಗೀತಾ ವಾಲ್ಮೀಕಿ, ಶೇಖವ್ವ ಶಿಗ್ಗಾವಿ, ಮೆಹಬೂಬಿ ನೀರಲಗಿ, ಮುಕ್ತಿಯಾರ ತಿಮ್ಮಾಪೂರ, ಮುನ್ನಾ ಲಕ್ಷ್ಮೇಶ್ವರ, ಗುಡ್ಡಪ್ಪ ಜಲದಿ, ಮಹಾಂತೇಶ ಸಾಲಿ, ಅತ್ತಾವುಲ್ಲಾಖಾನ ಖಾಜೇಖಾನವರ ಸೇರಿದಂತೆ ಪುರಸಭೆ ಸಿಬ್ಬಂದಿ ವರ್ಗದವರು ಹಾಗೂ ಪಲಾನುಭವಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 