ಕ್ಷೇತ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಶಾಸಕ ಪಠಾಣ
MLA Pathana sheds light on the problems of the constituency
ಕ್ಷೇತ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಶಾಸಕ ಪಠಾಣ
ಶಿಗ್ಗಾವಿ 03 : ನನ್ನ ಮತಕ್ಷೇತ್ರ ಶಿಗ್ಗಾವಿ-ಸವಣೂರ ತಾಲೂಕು ಸೇರಿದಂತೆ ವಿವಿಧ ಭಾಗಗಳಲ್ಲಿ ರೈತರು ತಮ್ಮ ಕೃಷಿ ಜಮೀನಿನಲ್ಲಿ ಕೆಂಪು ಇಟ್ಟಿಗೆ ತಯಾರಿಸುತ್ತಿದ್ದಾರೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆಯವರು ರೈತರಿಗೆ ಮಾಹಿತಿ ಇಲ್ಲದೆ ಪಹಣಿಯಲ್ಲಿ ತಾಲೂಕಿನಲ್ಲಿ ಸುಮಾರು ರೈತರಿಗೆ 5 ಕೋಟಿ ರೂಪಾಯಿಗೂ ಹೆಚ್ಚು ಭೋಜ ಕೂರಿಸಿದ್ದಾರೆ. ಕೂರಿಸಿದ ಪರಿಣಾಮ ರೈತರಿಗೆ ಬೆಳೆ ಸಾಲ, ಯಾವುದೇ ರೀತಿಯ ಸರ್ಕಾರದ ಸವಲತ್ತುಗಳು ಪಡೆದುಕೊಳ್ಳಲು ಸಾಧ್ಯವಾಗದೇ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಭಾದ್ಯಕ್ಷರಿಗೆ ಮನವಿ ಮಾಡಿದರು. ಈ ವಿಷಯವಾಗಿ ಹಿಂದೆ ಜಿಲ್ಲಾ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಪಹಣಿಯಲ್ಲಿರುವ ಭೋಜ ತೆಗೆಯಲು ಕಂದಾಯ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿತ್ತು ಆದರೂ ಸಹಿತ ವಿಳಂಬವಾದ ಹಿನ್ನೆಲೆಯಲ್ಲಿ ಸದನದಲ್ಲಿ ಮತ್ತೊಮ್ಮೆ ಸಭಾಧಕ್ಷರ ಮತ್ತು ಸಚಿವರ ಗಮನ ಸೆಳೆದೆನು. ತಕ್ಷಣ ಸ್ಪಂದಿಸಿದ ಸಚಿವರು ಮಗದೊಮ್ಮೆ ದಾಖಲೆಗಳನ್ನು ಪರೀಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 