ಮರಾಠಾ ಸಮಾಜ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಆರ್.ವಿ. ದೇಶಪಾಂಡೆ
MLA RV Deshpande at a meeting of Maratha Samaj Congress workers
ದಾಂಡೇಲಿ .ಜ. 19 : ದಾಂಡೇಲಿಯ ಮರಾಠಾ ಸಮಾಜದ ಸಭಾಭವನದಲ್ಲಿ ನಡೆದ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕರಾದ ಆರ್.ವಿ.ದೇಶಪಾಂಡೆ ಮಾತನಾಡಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅಭಿವೃದ್ದಿ ಕಾರ್ಯಗಳು ಮತ್ತು ಜನಪರ ಯೋಜನೆಗಳನ್ನು ಮನೆ ಮನೆಗೂ ತಲುಪಿಸುವ ಜವಾಬ್ದಾರಿ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಜನ ಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಜನರ ಮುಂದೆ ಸ್ಪಷ್ಟವಾಗಿ ಎಳೆ ಎಳೆಯಾಗಿ ಇಟ್ಟು ವಿವರಿಸಬೇಕು ಎಂದರು.
ಪಕ್ಷಕ್ಕೆ ಕಾರ್ಯಕರ್ತರೆ ಜೀವಾಳ ಆಗಿದ್ದು ಅವರನ್ನು ಸದೃಡಗೊಳಿಸುವದು ಅತ್ಯಗತ್ಯವಾಗಿದೆ. ಪಕ್ಷ ಸಂಘಟನೆ ಸುಲಭದ ಕೆಲಸವಲ್ಲ . ಪ್ರತಿಯೊಬ್ಬ ಕಾರ್ಯಕರ್ತರು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಜನರ ನಡುವೆ ಹೋಗಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಜನಸಾಮಾನ್ಯರ ನೋವು ನಲಿವುಗಳನ್ನು ಅರಿತು ಅವರಿಗೆ ಧೈರ್ಯ ತುಂಬುವ ಕೆಲಸ ಕಾಂಗ್ರೆಸ್ ಕಾರ್ಯಕರ್ತರಿಂದ ಆಗಬೇಕು ನಗರಸಭೆ ಮತ್ತು ಗ್ರಾಮ ಪಂಚಾಯತಿಗಳ ಅವಧಿ ಈಗಾಗಲೇ ಮುಗಿದಿದ್ದು, ಸದ್ಯದಲ್ಲೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಕ್ಷ ಸಂಘಟನೆಗೆ ಆದ್ಯತೆ ನೀಡಿ ಜನರೊಂದಿಗೆ ನೇರ ಸಂವಹನ ನಡೆಸಬೇಕು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತತು ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಎಂದು ದೇಶಪಾಂಡೆ ಹೇಳಿದರು.
ಸಭೆಯಲ್ಲಿ ಮಾತನಾಡಿದ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಪೂರ್ಣ ಸಿದ್ದತೆ ನಡೆಸಲಾಗುವದು ಎಂದು ತಿಳಿಸಿದರು, ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ಸ್ಥಳೀಯ ಪದಾಧಿಕಾರಿಗಳಾದ ಕೀರ್ತಿ ಗಾಂವಕರ, ರೇಣುಕ ಬದಂ, ಯಾಸ್ಮೀನ ಕಿತ್ತೂರ, ಮೊಹಮ್ಮದ್ ಉಸ್ಮಾನ ಶೇಖ, ಇಕ್ಬಾಲ್ ಶೇಖ, ನಗರಸಭೆಯ ನಿಕಟ ಪೂರ್ವಅಧ್ಯಕ್ಷ ಅಷ್ಪಾಕ ಶೇಖ, ತಾಲೂಕಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ರಿಯಾಜ ಬಾಬು ಸೈಯ್ಯದ್ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 