ದೇವರಹಿಪ್ಪರಗಿ 04: ತಾಲ್ಲೂಕಿನ ಅಲ್ಪಸಂಖ್ಯಾತ ವರ್ಗದವರು ಹೆಚ್ಚಾಗಿರುವ ಕಾಲೊನಿಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ತಿಳಿಸಿದರು.
ತಾಲೂಕಿನ ಬಿ.ಬಿ.ಇಂಗಳಗಿ ಹಾಗೂ ಮಣ್ಣೂರ ಗ್ರಾಮದ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಮಂಗಳವಾರದಂದು ತಲಾ 50 ಲಕ್ಷ ರೂ ವೆಚ್ಚದ ಸಿ.ಸಿ.ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುವ ಗುಣ ನಮ್ಮದು. ಅಲ್ಪಸಂಖ್ಯಾತರ ಅಭಿವೃದ್ಧಿಯ ವಿಷಯದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ. ಚುನಾವಣೆ ಬೇರೆ, ಅಭಿವೃದ್ಧಿ ಬೇರೆ. ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದ ಮೇಲೆ ಒತ್ತಡ ತಂದು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ. ಬರುವಂತ ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನವನ್ನು ತಂದು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷರಾದ ಸಾಯಿಬಣ್ಣ ಬಾಗೇವಾಡಿ ಅವರು ಮಾತನಾಡಿ, ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಸರ್ವಜನ ಸಂಪನ್ನರು, ಜಾತ್ಯತೀತ ವ್ಯಕ್ತಿಗಳಾಗಿ ಸರ್ವ ಜನಾಂಗದ ಅಭಿವೃದ್ಧಿಗಾಗಿ ಆರೋಗ್ಯ ಲೆಕ್ಕಿಸದೆ ಹಗಲಿರಳು ಶ್ರಮಿಸುತ್ತಿದ್ದಾರೆ. ಬರುವಂತ ದಿನಗಳಲ್ಲಿ ಶಾಸಕರು ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲರೂ ಸಹಕಾರ ನೀಡೋಣ ಎಂದು ಹೇಳಿದರು.
ಲ್ಯಾಂಡ್ ಆರ್ಮಿ ಇಲಾಖೆಯ ಎಇಇ ರಾಜಶೇಖರ ರೆಡ್ಡಿ ಅವರು, ಕಾಮಗಾರಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಕಿರಿಯ ಅಭಿ ಯಂತ್ರರಾದ ಪ್ರಫುಲಕುಮಾರ ಸಾತ್ ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಗಣ್ಯರು, ಸಮುದಾಯದ ಮುಖಂಡರು, ಜೆಡಿಎಸ್ ಕಾರ್ಯಕರ್ತರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.