ಶಾಸಕ ರಾಜು ಕಾಗೆ ಜನ್ಮ ದಿನ, ಅಥಣಿಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ
MLA Raju Kage's birthday, fruits distributed to patients in Athani
ಲೋಕದರ್ಶನ ವರದಿ
ಅಥಣಿ. 21: ಕಾಗವಾಡ ಶಾಸಕ, ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಮತ್ತು ಬಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ರಾಜು ಕಾಗೆಯವರ 68 ನೇ ಜನ್ಮ ದಿನದ ಅಂಗವಾಗಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ನೇತೃತ್ವದಲ್ಲಿ ತಾಲೂಕಾ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸುವ ಕಾರ್ಯಕ್ರಮ ಜರುಗಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ, ಶಾಸಕ ರಾಜು ಕಾಗೆಯವರ ರಾಜಕೀಯ ಭವಿಷ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತರೊತ್ತರವಾಗಿ ಬೆಳೆಯಲಿ ಎಂದು ಶುಭ ಹಾರೈಸಿದ ಅವರು ರಾಜು ಕಾಗೆ ಸಾಕಷ್ಟು ವರ್ಷಗಳಿಂದ ರಾಜಕೀಯ, ಸಾಮಾಜಿಕ, ಸಹಕಾರ ಕ್ಷೇತ್ರಗಳ ಮೂಲಕ ಸಾರ್ವಜನಿಕರಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದು, ಮುಂದೆಯೂ ಸಹ ಇದೇ ರೀತಿ ಸೇವೆ ಒದಗಿಸಲಿ ಎಂದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ ನಿರ್ದೇಶಕಿ ಸುನೀತಾ ಐಹೊಳೆ, ಕಾಂಗ್ರೆಸ್ ಮುಖಂಡರಾದ ಸಿದ್ಧಾರ್ಥ ಸಿಂಗೆ, ರಾವಸಾಹೇಬ ಐಹೊಳೆ, ಸೈಯ್ಯದ ಗಡ್ಡೇಕರ, ಸಲಾಂ ಕಲ್ಲಿ, ರಾಜು ಬಿಳ್ಳೂರ, ನಗರ ಸಭಾ ಸದಸ್ಯರಾದ ವೀಲೀನರಾಜ ಯಳಮೇಲಿ, ಸೈಯ್ಯದಮೀನ್ ಗದ್ಯಾಳ ರಮೇಶ ಪವಾರ, ಉದಯ ಸೋಳಸಿ, ರಿಯಾಜ ಸನದಿ, ಬಾಬು ಖೆಮಲಾಪುರ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ರಾಜು ಕಾಗೆ ಅಭಿಮಾನಿಗಳು ಪಾಲ್ಗೊಂಡಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 