ಶಾಸಕ ರಾಜುಗೌಡ ಹುಟ್ಟುಹಬ್ಬ: ಅಂಧ ಮಕ್ಕಳಿಗೆ ಅನ್ನಪ್ರಸಾದ ಉಪಕರಣಗಳ ವಿತರಣೆ
MLA Rajugowda's birthday: Distribution of Annaprasad equipment to blind children
ದೇವರಹಿಪ್ಪರಗಿ 14: ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ವಿಜಯಪುರದ ಶ್ರೀ ಶಿವಶರಣ ಹರಳಯ್ಯ ವಿದ್ಯಾವರ್ಧಕ ಅಂಧ ಸಂಸ್ಥೆ, ಅಂಧ ಮಕ್ಕಳ ಪ್ರಾಥಮಿಕ ವಸತಿ ಶಾಲೆಯಲ್ಲಿ ಮಕ್ಕಳಿಗಾಗಿ ಒಂದು ದಿನದ ಅನ್ನಪ್ರಸಾದ ಹಾಗೂ ಉಪಕರಣಗಳನ್ನು ವಿತರಣೆ ಮಾಡಲಾಯಿತು.
ನಂತರ ಯುವ ಮುಖಂಡ ಅಕ್ಷಯ ಗೊಬ್ಬರ ಅವರು ಮಾತನಾಡಿ, ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಪ್ರಥಮ ಬಾರಿ ಶಾಸಕರಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆಯಲು ಸಹಾಯ ಮಾಡಿದ್ದಾರೆ, ಅವರು ಹುಟ್ಟು ಹಬ್ಬದ ಆಚರಣೆ ಬೇಡ ಎಂದಿದ್ದಾರೆ ನಾವೆಲ್ಲ ಸ್ನೇಹಿತರು ಕೂಡಿ ಅಂಧ ಶಾಲಾ ಮಕ್ಕಳಿಗೆ ಕೈಲಾದ ಸಹಾಯ ಮಾಡಿ,ಶಾಸಕರುಉತ್ತಮ ಕೆಲಸಗಳನ್ನು ಮಾಡುವ ಮೂಲಕ ಜನಮನ್ನಣೆ ಗಳಿಸಿರುವ ಅವರಿಗೆ ದೇವರು ಆಯಸ್ಸು, ಆರೋಗ್ಯ ಕೊಟ್ಟು ಇನ್ನು ಹೆಚ್ಚಿನ ಶಕ್ತಿ ಕೊಡಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಶಾಶು ಬಾಗಲಕೋಟ, ಮಹೇಶ ಬಾಗೇವಾಡಿ, ಕುಮಾರ ಮಾಳನೂರ, ನವೀನ್ ಕುಲಕರ್ಣಿ, ದರ್ಶನ ಗುನ್ನಾಪುರ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 