ಸ್ವಾಮೀಜಿ ನಿಧನಕ್ಕೆ ಶಾಸಕ ರಾಜುಗೌಡ ಸಂತಾಪ
MLA Rajugowda condoles the death of Swamiji
ದೇವರಹಿಪ್ಪರಗಿ 12 : ಇಂಗಳೇಶ್ವರದ ವಚನಶಿಲಾ ಮಂಟಪದ ನಿರ್ಮಾತೃ ಪ.ಪೂ ಚನ್ನಬಸವ ಮಹಾಸ್ವಾಮಿಗಳು ಲಿಂಗೈಕೈರಾಗಿರುವ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.ಸುದ್ದಿಗಾರರ ಜೊತೆ ಶುಕ್ರವಾರದಂದು ಮಾತನಾಡಿದ ಅವರು,ನಾಡಿನ ಆಧ್ಯಾತ್ಮಿಕ, ಸಾಮಾಜಿಕ ಚಟುವಟಿಕೆಗಳ ಜೊತೆಗೆ ಇಂಗಳೇಶ್ವರದಲ್ಲಿ ಸುಮಾರು 1700 ವಚನಗಳ ಶಿಲಾಮಂಟಪ ಸ್ಥಾಪಿಸುವ ಮೂಲಕ ಸಮಾನತೆಯ ಸಂದೇಶ ಸಾರಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸರ್ವಾಧ್ಯಕ್ಷರಾಗಿ ಸಾಹಿತಿಗಳಿಗೆ ಮಾರ್ಗದರ್ಶಕರಾಗಿದ್ದರು.
ತಮ್ಮ ಹಲವು ಧಾರ್ಮಿಕ ಸಮಾಜಮುಖಿ ಸೇವಾ ಕಾರ್ಯಗಳಿಂದ ಭಕ್ತರ ಪಾಲಿಗೆ ನಡೆದಾಡುವ ದೇವರಾಗಿದ್ದರು. ಶ್ರೀಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ. ಭಕ್ತ ವೃಂದಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಜನತೆಯ ಪರವಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.ಗಣ್ಯರಿಂದ ಸಂತಾಪ: ದೇವರಹಿಪ್ಪರಗಿ ಪಟ್ಟಣದ ಶ್ರೀಗಳು, ಮಾಜಿ ಶಾಸಕರುಗಳಾದ ಸೋಮನಗೌಡ ಪಾಟೀಲ ಸಾಸನೂರ, ಶರಣಪ್ಪ ಸುಣಗಾರ,ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ), ಆನಂದಗೌಡ ದೋಡಮನಿ, ಕೆಪಿಸಿಸಿ ಸದಸ್ಯರಾದ ಬಿ.ಎಸ್.ಪಾಟೀಲ (ಯಾಳಗಿ) ಸೇರಿದಂತೆ ರಾಜಕೀಯ ಮುಖಂಡರು, ಪಟ್ಟಣದ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 