ಜೆಡಿಎಸ್ ರಾಜ್ಯ ಪ್ರಚಾರ ಸಮಿತಿ ಸದಸ್ಯರಾಗಿ ಶಾಸಕ ರಾಜುಗೌಡ ಆಯ್ಕೆ
MLA Rajugowda elected as JDS state campaign committee member
ದೇವರಹಿಪ್ಪರಗಿ 13: ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷದ ಕಾರ್ಯ ಚಟುವಟಿಕೆ, ಕಾರ್ಯ ಕಲಾಪ ಹಾಗೂ ಸಂಘಟನೆ ಒಳಗೊಂಡಂತೆ ಹಲವಾರು ಪ್ರಮುಖ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಚಾರ ಪಡಿಸಲು ಮತ್ತು ಮಾಧ್ಯಮದೊಂದಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜೆಡಿಎಸ್ ರಾಜ್ಯ ಪ್ರಚಾರ ಸಮಿತಿ ಸದಸ್ಯರಾಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಕಡೂರ್ ಮತಕ್ಷೇತ್ರದ ಮಾಜಿ ಶಾಸಕರಾದ ವೈ.ಎಸ್.ವಿ. ದತ್ತ ಅವರು ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಹಾಗೂ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಸೇರಿದಂತೆ 15ಜನ ಮುಖಂಡರನ್ನು ಸದಸ್ಯರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಬರುವಂತ ದಿನಗಳಲ್ಲಿ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಗಳು ಬರಲಿದ್ದು ಜೆಡಿಎಸ್ ಪಕ್ಷವನ್ನು ಗ್ರಾಮೀಣ ಮಟ್ಟದಿಂದ ಸಂಘಟಿಸುವ ಮೂಲಕ ರಾಜ್ಯದಲ್ಲಿ ಪಕ್ಷ ಬಲಗೊಳಿಸಬೇಕು ಎಂದು ತಿಳಿಸಿದ್ದಾರೆ.
ಪ್ರಚಾರ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಶಾಸಕ ರಾಜುಗೌಡರಿಗೆ ಜೆಡಿಎಸ್ ಪಕ್ಷದ ಜಿಲ್ಲಾ, ತಾಲೂಕು ಘಟಕದ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿನಂದನೆಗಳು ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 