ಕೋರವಾರದಲ್ಲಿ 387ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ರಾಜುಗೌಡ ಭೂಮಿ ಪೂಜೆ
MLA Rajugowda performs Bhoomi Puja for various works worth Rs. 387 lakh in Korwar
ದೇವರಹಿಪ್ಪರಗಿ 11: ಕ್ಷೇತ್ರದ ಜನರಿಗೆ ಅಗತ್ಯವಿರುವ ಗುಣಮಟ್ಟದ ಶಿಕ್ಷಣ, ನೀರಾವರಿ ಮತ್ತು ಆರೋಗ್ಯ ಉತ್ತಮ ಪಡಿಸುವ ಜೊತೆಗೆ ಕೋರವಾರ ಒಂದೇ ಗ್ರಾಮದಲ್ಲಿ ಸುಮಾರು 387ಲಕ್ಷ ರೂ ವೆಚ್ಚದ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸುವುದರ ಮೂಲಕ ಗ್ರಾಮದ ಜೊತೆ ಕ್ಷೇತ್ರದ ಸಮಗ್ರ ಎಲ್ಲ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ತಿಳಿಸಿದರು.
ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಶುಕ್ರವಾರ ಸುಮಾರು 387 ಲಕ್ಷ ರೂ, ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಗ್ರಾಮದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇನೆ,ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ದುಡಿಯುವುದರ ಜೊತೆಗೆ ಎಲ್ಲಾ ವರ್ಗದ ಜನರಿಗೆ ಪ್ರಾಮಾಣಿಕವಾಗಿ ಸರ್ಕಾರಿ ಸೌಲತ್ತುಗಳನ್ನು ತಲುಪಿಸಲು ಬದ್ಧನಾಗಿದ್ದೇನೆ.
ಸರ್ಕಾರದ ಅನುದಾನದ ಕೊರತೆಯಲ್ಲಿ ಗ್ರಾಮದಲ್ಲಿ ಸುಮಾರು 100ಲಕ್ಷ ರೂ, ವೆಚ್ಚದ ಸಿ.ಸಿ.ರಸ್ತೆ, ವಿವಿಧ ಯೋಜನೆಗಳ ಅಡಿಯಲ್ಲಿ ಕೈಲಾಸ ಮಠ, ಮಾಂತೇಶ್ವರ ಮಠ, ಬೀರಲಿಂಗೇಶ್ವರ ದೇವಸ್ಥಾನದ ಸಮುದಾಯ ಭವನ ಸೇರಿ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಸಮುದಾಯ ಭವನಗಳ ನಿರ್ಮಾಣ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಗೆ ಸುಮಾರು 266 ಲಕ್ಷ ರೂ ಅನುದಾನವನ್ನು ನೀಡುವ ಮೂಲಕ ಗ್ರಾಮದ ಅಭಿವೃದ್ಧಿಗೆ ಇಂದು ಸುಮಾರು 387 ಲಕ್ಷ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸುವ ಚುನಾವಣೆಯಲ್ಲಿ ಕೊಟ್ಟ ಮಾತನ್ನು ಈಡೇರಿಸಿದ್ದೇನೆ.
ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ, ಜನರಿಗೆ ಗುಣಮಟ್ಟದ ಆರೋಗ್ಯ, ಎಲ್ಲಾ ಸಮುದಾಯಕ್ಕೂ ಸಮುದಾಯ ಭವನ ಹಾಗೂ ನೂತನ ಪ್ರೌಢಶಾಲೆ ಉದ್ಘಾಟಿಸುವ ಮೂಲಕ ಆರೋಗ್ಯ, ರಸ್ತೆ, ನೀರಾವರಿ ಹಾಗೂ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಬರುವಂತ ದಿನಗಳಲ್ಲಿ ಇನ್ನು ಹತ್ತು ಹಲವಾರು ಕೆಲಸಗಳನ್ನು ಮಾಡುವ ಮೂಲಕ ಗ್ರಾಮದ ಜನರ ಬಹುದಿನದ ಬೇಡಿಕೆಯಾದ ಕೋರವಾರ ಗ್ರಾಮ ಹೋಬಳಿ ಕೇಂದ್ರ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆದಿದೆ, ಹೋಬಳಿ ಕೇಂದ್ರ ಮಾಡಲು ಬದ್ಧ ಎಂದು ಹೇಳಿದರು.
ಗ್ರಾಮದ ಪ್ರಮುಖರಾದ ಶೇಖರಗೌಡ ಪಾಟೀಲ ಹಾಗೂ ಎಂ.ಡಿ ವನಹಳ್ಳಿ ಅವರು ಮಾತನಾಡಿ, ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದ್ದ ನಮ್ಮ ಗ್ರಾಮಕ್ಕೆ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ವಿರೋಧ ಪಕ್ಷದಲ್ಲಿದ್ದರೂ ಸಾಕಷ್ಟು ಅನುದಾನ ನೀಡುವ ಮೂಲಕ ಗ್ರಾಮದ ಸರ್ವ ಸಮುದಾಯಕ್ಕೂ ಸಮುದಾಯ ಭವನ, ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ, ಶಿಕ್ಷಣ, ರಸ್ತೆ ಅಭಿವೃದ್ಧಿಗೆ ಹಾಗೂ ನೀರಾವರಿಗೆ ಹೆಚ್ಚಿನ ಒತ್ತು ನೀಡಿದ್ದಾರೆ ಅವರಿಗೆ ಪಕ್ಷಾತೀತವಾಗಿ ಗ್ರಾಮಸ್ಥರ ಪರವಾಗಿ ಧನ್ಯವಾದಗಳು ತಿಳಿಸುತ್ತೇವೆ ಎಂದು ಹೇಳಿದರು.
ಕಾರ್ಯಕ್ರಮದ ಸಾನಿಧ್ಯವನ್ನು ಸ್ಥಳೀಯ ಮಠದ ಕಾಶೀಲಿಂಗ ಮಹಾರಾಜರು ವಹಿಸಿದ್ದರು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಬಾಪುಗೌಡ ಪಾಟೀಲ,ಮಾಂತಗೌಡ ಸುಂಬಡ, ಗುರು ಹುಣಸಗಿ, ಮಲ್ಲಿಕಾರ್ಜುನ ಕಲಬುರ್ಗಿ, ಆರೋಗ್ಯ ಇಲಾಖೆಯ ಎಇಇ ಪ್ರಶಾಂತ ವಾಲ್ಲ್ಯಪುರ,ಎಇ ಮಹೇಶ ಜಾದವ, ಸಿಂಗಾಡಿ ಕನ್ಸ್ಟ್ರಕ್ಷನ್ ಗುತ್ತಿಗೆದಾರರಾದ ಪ್ರತೀಕ ಬಿರಾದಾರ, ಆನಂದ ದೇಸಾಯಿ, ರವಿ ಮಲಗೊಂಡ, ಆರೋಗ್ಯ ಇಲಾಖೆಯ ಡಾ. ಅನಿಲ ಕುಮಾರ ಬಿರಾದಾರ, ಎಂ.ಎಸ್. ಬಾಗೇವಾಡಿ, ಮಲ್ಲನಗೌಡ ಸಾಲವಾಡಗಿ, ಸಿದ್ದು ತಿಮ್ಮಾಪುರ, ಬಸವರಾಜು ಬಡಿಗೇರ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 