ಲಂಡನ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
MLA Ramesh Jarkiholi visits the house in London where Dr. B.R. Ambedkar lived.
ಬೆಳಗಾವಿ : ವಿದೇಶ ಪ್ರವಾಸದಲ್ಲಿರುವ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಲಂಡನ್‌ನಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವಾಸವಿದ್ದ ಸ್ಮಾರಕ ಮನೆಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.

ಲಂಡನ್‌ನಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸ್ಮಾರಕ ಮನೆಯನ್ನು ಸಂದರ್ಶಿಸಿದ ರಮೇಶ್ ಜಾರಕಿಹೊಳಿ ಅವರು, ಅಂಬೇಡ್ಕರ್ ಅವರ ಜೀವನ, ಚಿಂತನೆ ಹಾಗೂ ಸಾಮಾಜಿಕ ನ್ಯಾಯದ ಹೋರಾಟವನ್ನು ಸ್ಮರಿಸಿದರು.
ಸಮಾಜದ ಹಿಂದುಳಿದ ಹಾಗೂ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ಹೋರಾಡಿದ ಡಾ. ಅಂಬೇಡ್ಕರ್ ಅವರು ದೇಶದ ಕೋಟ್ಯಂತರ ಜನರಿಗೆ ಪ್ರೇರಣೆಯಾಗಿದ್ದಾರೆ. ಅವರ ಸ್ಮಾರಕ ಮನೆಗೆ ಭೇಟಿ ನೀಡಿರುವುದು ಗೌರವದ ಕ್ಷಣವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ರಾಜೀವ್ ಕೆ. ಮೆತ್ರಿ, ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 