ಹತ್ಯೆಯಾದ ರಂಜಿತಾ ಬನಸೋಡೆ ಕುಟುಂಬಸ್ಥರಿಗೆ 8.5 ಲಕ್ಷ ರೂ. ಪರಿಹಾರ : ಚೆಕ್ ವಿತರಿಸಿದ ಶಾಸಕ ಶಿವರಾಮ ಹೆಬ್ಬಾರ್
MLA Shivaram Hebbar distributes Rs 8.5 lakh compensation to the family of murdered Ranjitha Banasode
ಕಾರವಾರ 04 : ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ಕೊಲೆಯಾದ ರಂಜಿತಾ ಬನಸೋಡೆ ಅವರ ಕುಟುಂಬಸ್ಥರಿಗೆ 8.5 ಲಕ್ಷ ರೂ. ಪರಿಹಾರ ಧನದ ಚೆಕ್ ನ್ನು ಶಾಸಕ ಶಿವರಾಮ ಹೆಬ್ಬಾರ್ ವಿತರಿಸಿದರು. ರಂಜಿತಾ ಬನಸೋಡೆ ಅಮಾನವೀಯವಾಗಿ ಕೊಲೆಯಾಗಿ ಮೃತಪಟ್ಟಿದ್ದು, ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಹ ದುರ್ಘಟನೆಯಾಗಿದೆ ಎಂದು ಹೆಬ್ಬಾರ್ ಪ್ರತಿಕ್ರಿಯಿಸಿದರು.ರವಿವಾರ ಮೃತ ಮಹಿಳೆಯು ವಾಸವಿದ್ದ ಸಂಬಂಧಿಕರ ನಿವಾಸಕ್ಕೆ ಭೇಟಿ ನೀಡಿ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾದ 8.25 ಲಕ್ಷ ರೂಪಾಯಿ ಪರಿಹಾರ ಧನದ ಆದೇಶ ಪತ್ರವನ್ನು ಕುಟುಂಬಸ್ಥರಿಗೆ ವಿತರಿಸಿದರು. ಬಳಿಕ ರಂಜಿತಾ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ಅಧಿಕಾರ ದೀಪನ್.ಎಂ.ಎನ್, ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ, ತಹಶಿಲ್ದಾರ ಚಂದ್ರಶೇಖರ ಹೊಸ್ಮನಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿ.ಎಸ್. ಭಟ್ ಸೇರಿದಂತೆ ಪೋಲಿಸ್ ಇಲಾಖೆಯ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 