ಉದ್ಯೋಗ ಖಾತ್ರಿ ಯೋಜನೆಯಡಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಅಡುಗೆ ಕೊಠಡಿಯನ್ನು ಶಾಸಕ ಶ್ರೀನಿವಾಸ ಮಾನೆ
MLA Srinivas Mane inaugurated the new kitchen built at a cost of Rs. 10 lakh under the employment gu
ಹಾನಗಲ್ 16 :ತಾಲೂಕಿನ ಬಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಹನುಮಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಅಡುಗೆ ಕೊಠಡಿಯನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.
ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದ ಗ್ರಾಮೀಣಾಭಿವೃದ್ಧಿ ಸಾಧ್ಯವಿದೆ. ಯೋಜನೆಯಡಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಸಹ ಕಲ್ಪಿಸಬಹುದಾಗಿದ್ದು, ಇದಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯವಿದೆ. ತಾಲೂಕಿನಲ್ಲಿ ಸರ್ಕಾರಿ ಶಾಲೆಗಳ ಕೊಠಡಿಗಳ ದುರಸ್ತಿ, ಹೊಸ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಕರ ನಿಯೋಜನೆ, ಮೂಲಸೌಲಭ್ಯ ಕಲ್ಪಿಸುವ ಮೂಲಕ ಶಾಲೆಗಳನ್ನು ಕಲಿಕಾಸ್ನೇಹಿಯಾಗಿ ಪರಿವರ್ತಿಸಲು ಕಾಳಜಿ ವಹಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಶಾಸಕ ಮಾನೆ ತಿಳಿಸಿದರು. ಶಿ
ಗ್ಗಾಂವಿ-ಸವಣೂರು ಶಾಸಕ ಯಾಸೀರ್‌ಖಾನ ಪಠಾಣ, ತಹಶೀಲ್ದಾರ್ ರೇಣುಕಾ ಎಸ್., ಕೆಡಿಪಿ ಸದಸ್ಯ ಮಹ್ಮದ್‌ಹನೀಫ್ ಬಂಕಾಪೂರ, ಗ್ರಾಪಂ ಸದಸ್ಯರಾದ ಅರುಣ ಮಲ್ಲಮ್ಮನವರ, ಪತಂಗಸಾಬ ಮಕಾನದಾರ, ರಾಮಣ್ಣ ವಡ್ಡರ, ಲಕ್ಷ್ಮೀ ಕಲಾಲ, ಗದಿಗೆವ್ವ ಚಿಕ್ಕಣಗಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಪದ್ಮಾ ಬೇಂದ್ರೆ, ಮುಖಂಡರಾದ ಚನ್ನಬಸಣ್ಣ ಬಿದರಗಡ್ಡಿ, ನಾಗರಾಜ ಮಲ್ಲಮ್ಮನವರ, ಮಲ್ಲನಗೌಡ ಪಾಟೀಲ, ಚಮನಸಾಬ ಪಾಟೀಲ, ಮಲ್ಲೇಶಪ್ಪ ಕ್ಷೌರದ, ರಾಮಣ್ಣ ರಾಮಜಿ, ಮಾರುತಿ ಮುದುಕಣ್ಣನವರ, ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಚಂದ್ರಪ್ಪ ಜಾಲಗಾರ, ಈರಣ್ಣ ಬೈಲವಾಳ, ಭರಮಣ್ಣ ಶಿವೂರ, ಆದರ್ಶ ಶೆಟ್ಟಿ, ತಾಪಂ ಇಒ ಪರಶುರಾಮ ಪೂಜಾರ, ಪಿಡಿಒ ಪ್ರವೀಣ ಸಾಳಗುಂದಿ, ಹಜರೇಸಾಬ ವಾಗಿನಕೊಪ್ಪ, ಚನ್ನವೀರಗೌಡ ಪಾಟೀಲ, ಉಸ್ಮಾನ ಮಕಾನದಾರ, ಗುಡದಪ್ಪ ಚಿಕ್ಕಣಗಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 