25 ಲಕ್ಷ ರೂ. ವೆಚ್ಚದಲ್ಲಿ ವೆಚ್ಚದಲ್ಲಿ ನಾನಾ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ
MLA Srinivas Mane performs Bhoomi Pooja for various works costing Rs. 25 lakhs
ಲೋಕದರ್ಶನ ವರದಿ
ಹಾನಗಲ್ 27: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ 2025-26 ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಯೋಜನೆಯಡಿ 25 ಲಕ್ಷ ರೂ. ವೆಚ್ಚದಲ್ಲಿ ವೆಚ್ಚದಲ್ಲಿ ಕೋರ್ಟ್ ಹಾಲ್ ನವೀಕರಣ, ಕಟ್ಟಡಕ್ಕೆ ಬಣ್ಣ ಹಚ್ಚುವುದು, ಮೇಲ್ಛಾವಣಿ ದುರಸ್ತಿ, ಶೆಡ್ ನವೀಕರಣ ಸೇರಿದಂತೆ ನಾನಾ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ತಾಲೂಕಿನಲ್ಲಿ ಕಂದಾಯ ಇಲಾಖೆಯ ಸೇವೆಯಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ. ಹಕ್ಕುಪತ್ರ ವಿತರಣೆಯಲ್ಲಿ ರಾಜ್ಯದಲ್ಲಿಯೇ ಹಾನಗಲ್ ಮೊದಲ ಸ್ಥಾನದಲ್ಲಿದೆ. 41 ಲಕ್ಷ ಪುಟ ಕಂದಾಯ ದಾಖಲೆಗಳ ಡಿಜಿಟಲೀಕರಣ ಈಗಾಗಲೇ ಪೂರ್ಣಗೊಂಡಿದ್ದು, ದಾಖಲೆಗಳ ಬೆರಳ ತುದಿಯಲ್ಲಿ ಲಭಿಸುತ್ತಿವೆ. ನಿತ್ಯವೂ ಸಹ ತಾಲೂಕಿನ ನಾನಾ ಗ್ರಾಮಗಳಿಂದ ನೂರಾರು ಸಾರ್ವಜನಿಕರು ಕಚೇರಿಗೆ ಆಗಮಿಸುತ್ತಾರೆ. ಹಾಗಾಗಿ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಇನ್ನೂ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಕಚೇರಿಯ ಕಟ್ಟಡ ದುರಸ್ತಿಗೊಳಿಸಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಶಾಸಕ ಮಾನೆ ತಿಳಿಸಿದರು.
ತಹಶೀಲ್ದಾರ್ ರೇಣುಕಾ ಎಸ್., ಪುರಸಭೆ ಮಾಜಿ ಅಧ್ಯಕ್ಷರಾದ ರಾಧಿಕಾ ದೇಶಪಾಂಡೆ, ಮಮತಾ ಆರೆಗೊಪ್ಪ, ಮುಖ್ಯಾಧಿಕಾರಿ ವೈ.ಕೆ.ಜಗದೀಶ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ಈರಣ್ಣ ಬೈಲವಾಳ, ಸುರೇಶ ಮುಸುರಿ, ಲೋಕೋಪಯೋಗಿ ಇಲಾಖೆಯ ಎಇಇ ಎಸ್.ದೇವರಾಜು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 