ಶಾಸಕ ಟೆಂಗಿನಕಾಯಿ ಶ್ರೀ ಚಂದ್ರಮೌಳೆಶ್ವರ ದೇವಸ್ಥಾನಕ್ಕೆ ಭೇಟಿ

MLA Tenginakai Visit to Sri Chandramauleshwara temple

ಹುಬ್ಬಳ್ಳಿ 05: ನಗರದ ಐತಿಹಾಸಿಕ ಮತ್ತು ಇತಿಹಾಸ ಪ್ರಸಿದ್ಧ ಶ್ರೀ ಚಂದ್ರಮೌಳೆಶ್ವರ ದೇವಸ್ಥಾನದ ಅಭಿವೃದ್ಧಿ ಮತ್ತು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಸ್ತಾವನೆ ಸಿದ್ದಗೊಳಿಸಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಅವರು ಅಧಿಕಾರಿಗಳೊಂದಿಗೆ ಇಂದು ಮಧ್ಯಾಹ್ನ ದೇವಸ್ಥಾನಕ್ಕೆ ಭೇಟಿ ನೀಡಿ, ಮಾಹಿತಿ ಪಡೆದು ಚರ್ಚಿಸಿದರು.