ಏರೇಕಟ್ಟೆ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿರೂಪಾಕ್ಷಪ್ಪ ಪರಿಶೀಲನೆ

 ಲೋಕದರ್ಶನವರದಿ

ಬ್ಯಾಡಗಿ೨೦: ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನಲ್ಲಿ ಸಾವಿರಾರು ಮಂದಿಗೆ ಕೂಲಿ ಕೆಲಸ ನೀಡಲು ಸಾಧ್ಯವಾಗಿದ್ದು, ಕೂಲಿ ಕೆಲಸ ಮಾಡಲು ಮುಂದೆ ಬರುವ ಪ್ರತಿಯೊಬ್ಬರಿಗೂ ತಕ್ಷಣ ಜಾಬ್ ಕಾಡರ್್ ನೀಡಲಾಗುವುದು ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ  ತಿಳಿಸಿದರು. 

ಮಂಗಳವಾರ ತಾಲೂಕಿನ ಕುಮ್ಮೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಾಸಂಬಿ ಗ್ರಾಮಕ್ಕೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ 10 ಲಕ್ಷ ರೂಗಳ ವೆಚ್ಚದಲ್ಲಿ ಕೈಗೊಂಡಿರುವ ಏರೇಕಟ್ಟೆ ಕೆರೆ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆ ನಡೆಸಿ ಮಾತನಾಡಿದ ಅವರು ನರೇಗಾ ಯೋಜನೆಯಡಿ ಪ್ರತಿಯೊಂದು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೆಲಸವನ್ನು ನಿಗದಿಪಡಿಸಲಾಗಿದೆ. ಅಂತರ್ಜಲ ಚೇತನ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಗುರುತಿಸಲಾಗಿದ್ದು, ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲು, ಕೆಲಸದ ಸ್ಥಳದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು  ಮಾತ್ರವಲ್ಲದೆ ಕೂಲಿ ಕೆಲಸದವರಿಗೆ ಕುಡಿಯುವ ನೀರು ಇತ್ಯಾದಿ ಮೂಲಸೌಲಭ್ಯಗಳನ್ನು ಸಹ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಅಲ್ಲದೇ ಗ್ರಾಮೀಣ ಭಾಗದ ನಿರುದ್ಯೋಗಿ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕಲ್ಪಿಸಬೇಕು. ಇದರಿಂದ ಈ ಸಂಕಷ್ಟಮಯ ಸಂದರ್ಭದಲ್ಲಿ ಆಥರ್ಿಕ ಪುನಶ್ಚೇತನ ಹೊಂದಲು ಸಾಧ್ಯವಾಗಲಿದೆ. 

  ನಗರ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಲಾಕ್ಡೌನ್ ಸಂದರ್ಭದಲ್ಲಿ ವಲಸೆ ಬಂದಿರುವವರು, ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಬಯಸಿ ಅಜರ್ಿ ಸಲ್ಲಿಸಿದರೆ ತಕ್ಷಣ ಜಾಬ್ ಕಾಡರ್್ ನೀಡಬೇಕು. ಉದ್ಯೋಗ  ಖಾತ್ರಿ ಯೋಜನೆ ಅನುಷ್ಟಾನದಲ್ಲಿ ಯಾವುದೇ ಕರ್ತವ್ಯ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಉದ್ಯೋಗ ಖಾತ್ರಿ ಕಾಮಗಾರಿಗಳ ಅನುಷ್ಟಾನದ ಮೇಲೆ ಸಮರ್ಪಕವಾಗಿ ನಿಗಾ ವಹಿಸಬೇಕು ಎಂದು ಹೇಳಿದರು. 

     ತಾ ಪಂ. ಕಾರ್ಯ ನಿವರ್ಾಹಕ ಅಧಿಕಾರಿ ಅಬಿದ್ ಗದ್ಯಾಳ ಮಾತನಾಡಿ, ಸುಮಾರು ನಲ್ವತ್ತು ಎಕರೆ ವಿಸ್ತೀರ್ಣವುಳ್ಳ ಕಾಸಂಬಿ ಗ್ರಾಮದ ಏರೇಕಟ್ಟೆ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ಕಳೆದ ಒಂದು ವಾರದಿಂದ 250 ಕ್ಕೂ ಕೂಲಿ ಕಾಮರ್ಿಕರು  ಕೆಲಸ ಮಾಡುತ್ತಿದ್ದಾರೆ. ಈ ಕೆರೆಯ ಅಭಿವೃದ್ಧಿಗಾಗಿ 10 ಲಕ್ಷ ರೂಗಳ ವೆಚ್ಚದಲ್ಲಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ ಎಂದು ಶಾಸಕರ ಗಮನಕ್ಕೆ ತಂದರು. 

          ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ರವೀಂದ್ರ ಪಟ್ಟಣಶೆಟ್ಟಿ, ಉಮೇಶ ರಟ್ಟಿಹಳ್ಳಿ, ಗ್ರಾಮೀಣ ಉದ್ಯೋಗದ ಸಹಾಯಕ ನಿದರ್ೆಶಕ ಪರಶುರಾಮ ಪೂಜಾರ, ಪಿಡಿಓ ನೀಲಪ್ಪ ಕಜ್ಜರಿ, ಕಾರ್ಯದಶರ್ಿ ಈರಣ್ಣ ತಳವಾರ, ಶಾಸಕರ ಆಪ್ತ ಸಹಾಯಕ ಬಸವರಾಜ ಕುಲ್ಕಣರ್ಿ, ನರೇಗಾ ತಾಂತ್ರಿಕ ಸಹಾಯಕ ಶಾನವಾಜ್ ಚಿಣಗಿ ಉಪಸ್ಥಿತರಿದ್ದರು.