ಜಾತ್ರಾ ಅನ್ನಪ್ರಸಾದ ಸಿಬ್ಬಂದಿಯೊಂದಿಗೆ ಅಡಿಗೆ ಮಾಡಿದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya cooked with the staff of Jatra Annaprasad
ಸವದತ್ತಿ 12: ಐತಿಹಾಸಿಕ ಪ್ರಸಿದ್ಧ ಶ್ರೀ ಗ್ರಾಮದೇವಿಯ ಜಾತ್ರಾ ಮಹೋತ್ಸವವು ಸಮಾರೋಪದ ದಿನದಂದು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಸಂಭ್ರಮದ ಅಂಗವಾಗಿ ಭಕ್ತಾದಿಗಳಿಗಾಗಿ ಆಯೋಜಿಸಲಾಗಿದ್ದ ಬೃಹತ್ ಅನ್ನಪ್ರಸಾದ ಸೇವೆಯಲ್ಲಿ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರು ಅಡುಗೆ ಮಾಡುವ ಮೂಲಕ ತಮ್ಮ ಸರಳತೆಯನ್ನು ಮೆರೆದು ಎಲ್ಲರ ಗಮನ ಸೆಳೆದರು.ನಗರದ ಎಪಿಎಂಸಿ ಆವರಣದಲ್ಲಿ ಸಾವಿರಾರು ಭಕ್ತರಿಗಾಗಿ ದಾಸೋಹ ವ್ಯವಸ್ಥೆಯನ್ನು ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಭೇಟಿ ನೀಡಿದ ಅವರು ಕೇವಲ ಅತಿಥಿಯಾಗಿ ಉಳಿಯದೆ, ಸ್ವತಃ ಅಡುಗೆ ತಯಾರಿಸುವ ಸ್ಥಳಕ್ಕೆ ತೆರಳಿ ಸಿಬ್ಬಂದಿ ಹಾಗೂ ಸ್ವಯಂಸೇವಕರೊಂದಿಗೆ ಕೈಜೋಡಿಸಿದರು.
ಬೃಹತ್ ಪಾತ್ರೆಗಳಲ್ಲಿ ಅಡುಗೆ ತಯಾರಿಸುವಲ್ಲಿ ಸಾಥ್ ನೀಡುವ ಮೂಲಕ ಅಲ್ಲಿನ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದರು. ಬಳಿಕ ಶಾಸಕ ವಿಶ್ವಾಸ ವೈದ್ಯ ಅವರು ಅಡುಗೆ ತಯಾರಕರು ಮತ್ತು ಸ್ವಯಂಸೇವಕರೊಂದಿಗೆ ಸಾಮಾನ್ಯರಂತೆ ಬೆರೆತು ಕೆಲಸ ಮಾಡಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಜಾತ್ರೆಗೆ ದೂರದ ಊರುಗಳಿಂದ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಎಪಿಎಂಸಿ ಆವರಣದಲ್ಲಿ ಕುಡಿಯುವ ನೀರು ಮತ್ತು ಅನ್ನಪ್ರಸಾದದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿತ್ತು.
ಜಾತ್ರೆಯು ಕೇವಲ ಧಾರ್ಮಿಕ ಆಚರಣೆಯಲ್ಲ, ಇದು ಇಡೀ ಊರಿನ ಜನರನ್ನು ಒಗ್ಗೂಡಿಸುವ ಶಕ್ತಿಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.ಭಕ್ತರ ಸೇವೆಯೇ ದೇವನ ಸೇವೆ. ಗ್ರಾಮದೇವಿಯ ಜಾತ್ರೆಗೆ ಬರುವ ಪ್ರತಿಯೊಬ್ಬ ಭಕ್ತರೂ ತೃಪ್ತಿಯಿಂದ ಅನ್ನಪ್ರಸಾದ ಸ್ವೀಕರಿಸಬೇಕು ಎನ್ನುವುದೇ ನಮ್ಮ ಆಶಯ ಎಂದು ಹೇಳಿದರು.ಈ ಸಂದರ್ಭದಲ್ಲಿ ಜಾತ್ರಾ ಕಮಿಟಿಯ ಪದಾಧಿಕಾರಿಗಳು, ಪ್ರಮುಖ ಮುಖಂಡರು ಹಾಗೂ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 