ಹೊಸ ನಾನ್ - ಎಸಿ ಸ್ಲೀಪರ್ ಬಸ್ಗಳ ಲೋಕಾರೆ್ಣ ಶಾಸಕ ವಿಶ್ವಾಸ ವೈದ್ಯ
MLA Vishwas Vaidya inaugurates new non-AC sleeper buses
ಸವದತ್ತಿ 02 : ನಗರದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸವದತ್ತಿ ಘಟಕದ ವತಿಯಿಂದ ಸಾರ್ವಜನಿಕರ ಪ್ರಯಾಣ ಅನುಕೂಲಕ್ಕಾಗಿ ಸೇರೆ್ಡಗೊಳಿಸಲಾದ 2 ಹೊಸ ನಾನ್-ಎಸಿ ಸ್ಲೀಪರ್ ಬಸ್ಗಳಿಗೆ ಶಾಸಕ ವಿಶ್ವಾಸ ವೈದ್ಯ ಅವರು ಹಸಿರು ನಿಶಾನೆ ತೋರುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ನಗರದ ಬಸ್ ನಿಲ್ದಾಣದ ಆವರಣದಲ್ಲಿ ನಡೆದ ಈ ಸರಳ ಹಾಗೂ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಯಾಣಿಕರಿಗೆ ಅತ್ಯುತ್ತಮ, ಸುರಕ್ಷಿತ ಹಾಗೂ ಆರಾಮದಾಯಕ ಸಾರಿಗೆ ಸೇವೆಯನ್ನು ಒದಗಿಸುವುದು ನಮ್ಮ ಸರ್ಕಾರದ ಮತ್ತು ಸಾರಿಗೆ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.
ಸವದತ್ತಿ ಘಟಕಕ್ಕೆ ಹೊಸ ಬಸ್ಗಳು ಸೇರೆ್ಡಯಾಗಿರುವುದರಿಂದ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ, ಅದರಲ್ಲೂ ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಪ್ರಯಾಣಿಕರು ಸಾರಿಗೆ ಸಂಸ್ಥೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಸಾರ್ವಜನಿಕ ಆಸ್ತಿಯಾದ ಈ ಬಸ್ಗಳನ್ನು ಕಾಪಾಡಿಕೊಳ್ಳುವಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದರು. ಸವದತ್ತಿ ಘಟಕದ ವ್ಯವಸ್ಥಾಪಕ ಅರುಣ ಜಿ, ಗೀರೀಶ್ ಮುನವಳ್ಳಿ, ಬಸವರಾಜ ಪ್ರಭುನವರ, ಪ್ರವೀಣ್ ರಾಮಪ್ಪನವರ, ಹಮನಂತಪ್ಪ ಭೋವಿ, ಮಲ್ಲಿಕಾರ್ಜುನ ಬೇವೂರ, ಉಮೇಶ್ ಗೌಡರ, ಸುರೇಶ ತುಪ್ಪದ, ಆಸೀಫ ಬಾಗೋಜಿಕೊಪ್ಪ, ಹಾಗೂ ಘಟಕದ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ಪ್ರಮುಖರು, ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 