ವಾರ್ಡ್ಗಳ ಅಭಿವೃದ್ಧಿ ಕಾಮಗಾರಿಗಳ ಪರೀಶೀಲನೆ ನಡೆಸಿದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya inspected ward development works
ಸವದತ್ತಿ 28 : ರಾಮಾಪೂರಸೈಟ್ ಪ್ರದೇಶದ 23 ಮತ್ತು 24ನೇ ವಾರ್ಡ್ಗಳಿಗೆ ಸ್ಥಳೀಯ ಅವರು ಹಾಗೂ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ, ಬಡಾವಣೆಗಳಲ್ಲಿ ಪ್ರಗತಿಯಲ್ಲಿರುವ ಹಾಗೂ ಕೈಗೆತ್ತಿಕೊಳ್ಳಬೇಕಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರೀಶೀಲನೆ ನಡೆಸಿದರು. ಭೇಟಿಯ ಸಂದರ್ಭದಲ್ಲಿ ಶಾಸಕ ವಿಶ್ವಾಸ ವೈದ್ಯ ಅವರು ವಾರ್ಡ್ನ ಸ್ಥಳೀಯ ಸಾರ್ವಜನಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ವೇಳೆ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರು ಸರಬರಾಜು ಮತ್ತು ಬೀದಿ ದೀಪಗಳು ಸೇರಿದಂತೆ ಪ್ರಮುಖ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ವಿವರವಾಗಿ ಆಲಿಸಿದರು.ಸಾರ್ವಜನಿಕರು ಗಮನಕ್ಕೆ ತಂದ ವಿವಿಧ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿದ ಅವರು, ಬಾಕಿ ಇರುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅತ್ಯಂತ ಉತ್ತಮ ಗುಣಮಟ್ಟದಿಂದ ಮತ್ತು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ನಗರಸಭೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಪ್ರತಿಯೊಂದು ವಾರ್ಡ್ನ ಸಾರ್ವಜನಿಕರಿಗೆ ಸುಸಜ್ಜಿತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮತ್ತು ನಾಗರಿಕರ ಸುಗಮ ಜೀವನಕ್ಕೆ ಅನುಕೂಲ ಮಾಡಿಕೊಡುವುದು ನಮ್ಮ ಸರ್ಕಾರದ ಹಾಗೂ ಆಡಳಿತದ ಪ್ರಮುಖ ಆದ್ಯತೆಯಾಗಿದೆ ಎಂದರು. ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಗದಗಿನಮಠ, ಶಂಕರ್ ದಂಡಿನ, ಬಸವರಾಜ ಅಯ್ಯನಗೌಡ್ರ, ಅಶೋಕ ಮುರಗೋಡ,
ಗ್ಯಾರಂಟಿ ಸಮಿತಿಯ ಅಧ್ಯಕ್ಷ ಶಿವಕುಮಾರ್ ರಾಠೋಡ್, ಮಕ್ತುಮ ಹಲೀಮನವರ, ಬಸವರಾಜ ಅರಮನಿ, ಮಂಜುನಾಥ ಪಾಚಂಗಿ, ಶಿವಾನಂದ ಪಟ್ಟಣಶೆಟ್ಟಿ, ಪ್ರವೀಣ್ ಪಟ್ಟಣಶೆಟ್ಟಿ, ಸುನೀಲ್ ತಾರಿಹಾಳ, ಅಮೀರ್ ಗೋರಿನಾಯ್ಕ್, ಶಾಹಜಾನ ಸಂಗೊಳ್ಳಿ, ಅಬ್ದುಲ್ ಬೆಟಗೇರಿ, ಮಕ್ತುಮ ತಹಶೀಲ್ದಾರ, ಆಸೀಫ್ ಬಾಗೋಜಿಕೊಪ್ಪ, ಹಾಗೂ ಸ್ಥಳೀಯ ನಗರಸಭೆ ಅಧಿಕಾರಿಗಳು, ವಾರ್ಡ್ನ ಹಿರಿಯರು, ಮುಖಂಡರು ಮತ್ತು ನೂರಾರು ನಾಗರಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 