ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya performed Bhumi Puja for the restoration work of the temple
ಸವದತ್ತಿ 23 : ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸಂರಕ್ಷಣೆ ಮತ್ತು ಜೀರ್ಣೋದ್ಧಾರ ಕಾರ್ಯಗಳಿಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಅವರು ಹೇಳಿದರು. ನಗರದ ಹಣಮಗೇರಿ ಓಣಿಯಲ್ಲಿರುವ ಶಿವಶರಣ ಹಡಪದ ಅಪ್ಪಣ್ಣ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನ ಅಡಿಯಲ್ಲಿ ಭೂಮಿ ಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ಬೆಳಗಾವಿಯ ನಿರ್ಮಿತಿ ಕೇಂದ್ರದ ಅನುಷ್ಠಾನ ಇಲಾಖೆಯಡಿ ಈ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಜರುಗಲಿದ್ದು, ಒಟ್ಟು 10 ಲಕ್ಷ ರೂ. ವೆಚ್ಚದ ಈ ಕಾಮಗಾರಿಯನ್ನು ಅತ್ಯಂತ ಶ್ರದ್ಧೆ ಹಾಗೂ ಉತ್ತಮ ಗುಣಮಟ್ಟದೊಂದಿಗೆ, ನಿಗದಿತ ಅವಧಿಯೊಳಗೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಶಾಸಕರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಶಿವಶರಣ ಹಡಪದ ಅಪ್ಪಣ್ಣನವರ ಜೀವನ, ವಚನಗಳು ಹಾಗೂ ಅವರ ಉದಾತ್ತ ತತ್ತ್ವ- ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಅವರು ಸ್ಮರಿಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಚಂದ್ರು ಶಾಮರಾಯ್ಯನವರ, ಅಲ್ಲಮಪ್ರಭು ಪ್ರಭುನವರ, ಬಿ.ಎನ್. ಪ್ರಭುನವರ, ಸುರೇಶ ತುಪ್ಪದ, ಪ್ರವೀಣ ರಾಮಪ್ಪನವರ, ದೇವಸ್ಥಾನದ ಕಮಿಟಿ ಪದಾಧಿಕಾರಿಗಳು, ಸಂಬಂಧಪಟ್ಟ ಇಲಾಖೆಯ ಅಧಿಕಾರಿ, ಹಾಗೂ ಹಡಪದ ಸಮಾಜದ ಮುಖಂಡರು, ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 