ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸ್ಥಳ ಪರೀಶೀಲನೆ ನಡೆಸಿದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya received grievances from the public and conducted a site inspection
ಸವದತ್ತಿ 24: ನಗರದ ಶಾಂತಿ ನಗರ ಬಡಾವಣೆಗೆ ಶಾಸಕ ವಿಶ್ವಾಸ ವೈದ್ಯ ಅವರು ಖುದ್ದಾಗಿ ಭೇಟಿ ನೀಡಿ, ನಾಗರಿಕರೊಂದಿಗೆ ಸಮಾಲೋಚನೆ ನಡೆಸಿ ಮೂಲಭೂತ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.ನಗರದಲ್ಲಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬಸ್ ನಿಲ್ದಾಣದ ನಿರ್ಮಾಣ, ರಸ್ತೆ ಅಭಿವೃದ್ಧಿ, ಚರಂಡಿ ವ್ಯವಸ್ಥೆ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಬೇಡಿಕೆಗಳ ಕುರಿತು ಸಾರ್ವಜನಿಕರಿಂದ ಸಂಪೂರ್ಣ ವಿವರಗಳನ್ನು ಪಡೆದ ಅವರು, ತಕ್ಷಣವೇ ಸಂಬಂಧಪಟ್ಟ ಸ್ಥಳಗಳಿಗೆ ತೆರಳಿ ಪರೀಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ರಸ್ತೆ ನಿರ್ಮಾಣ ಮತ್ತು ಬಸ್ ತಂಗುದಾಣದ ಕಾಮಗಾರಿಗಳನ್ನು ಶೀಘ್ರದಲ್ಲೇ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ನಗರದ ಪ್ರತಿಯೊಂದು ಬಡಾವಣೆಯ ಮೂಲಭೂತ ಅಗತ್ಯತೆಗಳನ್ನು ಕಾಲಕಾಲಕ್ಕೆ ಪೂರೈಸುವುದು ಮತ್ತು ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಗದಗಿಮಠ, ಶಂಕರ ದಂಡಿನ, ಬಿ.ಎನ್. ಪ್ರಭುನವರ, ಆಶೀಪ್ ಬಾಗೋಜಿಕೊಪ್ಪ, ಅಮೀರ ಗೋರಿನಾಯಕ್, ಮೈಲಾರ್ಪ ಹೊಸಮನಿ, ಸುರೇಶ ತುಪ್ಪದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 