ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya visits Tirumala Venkateswara Swamy Temple
ಸವದತ್ತಿ 10: ಶಾಸಕ ವಿಶ್ವಾಸ ವೈದ್ಯ ಅವರು ಇತ್ತೀಚೆಗೆ ಪವಿತ್ರ ಯಾತ್ರಾಸ್ಥಳ ತಿರುಮಲಕ್ಕೆ ಭೇಟಿ ನೀಡಿ, ಕಲಿಯುಗದ ಪ್ರತ್ಯಕ್ಷ ದೈವ ಅಖಿಲಾಂಡಕೋಟಿ ಬ್ರಹ್ಮಾಂಡ ನಾಯಕ ತಿರುಪತಿ ತಿಮ್ಮಪ್ಪನ ಭವ್ಯ ದರ್ಶನ ಪಡೆದರು. ವೆಂಕಟೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ಅವರು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಬಳಿಕ ಮಾತನಾಡಿದ ಅವರು ವೆಂಕಟೇಶ್ವರ ಮಹಾಸ್ವಾಮಿಯ ಚರಣಾರವಿಂದಗಳಲ್ಲಿ ನನ್ನ ಸವದತ್ತಿ ಕ್ಷೇತ್ರದ ಸಮಸ್ತ ಜನತೆಗೆ ಆಯುಷ್ಯ, ಆರೋಗ್ಯ, ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದೇನೆ. ಜನರ ಆಶೀರ್ವಾದದಿಂದ ದೊರೆತ ಈ ಅವಕಾಶದಲ್ಲಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಲು ಭಗವಂತನ ಕೃಪೆ ಸದಾ ಇರಲಿ ಎಂದು ಕೋರಿದ್ದೇನೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 