ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಶಾಸಕ ವಿಶ್ವಾಸ ವೈದ್ಯರಿಂದ ಸನ್ಮಾನ
MLA Vishwas felicitates new office bearers of Primary School Teachers Association
ಸವದತ್ತಿ 25 : ಶಿಕ್ಷಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮತ್ತು ಶಿಕ್ಷಕರ ಏಳಿಗೆಗೆ ನಾನು ಸದಾ ಜೊತೆಯಾಗಿ ನಿಲ್ಲುತ್ತೇನೆ ಎಂದು ಶಾಸಕ ವಿಶ್ವಾಸ ವೈದ್ಯ ಅವರು ಭರವಸೆ ನೀಡಿದರು.ಸ್ಥಳೀಯ ಶಾಸಕ ಅವರ ಗೃಹ ಕಚೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಮತ್ತು ಸನ್ಮಾನ ಸಮಾರಂಭದಲ್ಲಿ ಅವರು ಶಿಕ್ಷಕರ ಸಂಘದ ನೂತನ ತಾಲೂಕು ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರನ್ನು ಅವರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಅವರು ಶಿಕ್ಷಕರ ಸಂಘದ ಪದಾಧಿಕಾರಿಗಳು ನನಗೆ ನೀಡಿದ ಪ್ರೀತಿಯ ಗೌರವ ಸಮರೆ್ಣಗೆ ನಾನು ಚಿರಋಣಿಯಾಗಿದ್ದೇನೆ.
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ ಎಂದರು.ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಎ. ಖಾಜಿ, ಮಾತನಾಡಿದ ಅವರು, ಶಾಲೆ, ಮಗು ಮತ್ತು ಶಿಕ್ಷಕರ ನಡುವಿನ ಬಾಂಧವ್ಯ ಹಾಗೂ ಶೈಕ್ಷಣಿಕ ಪ್ರಗತಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳನ್ನು ಶಾಸಕ ವಿಶ್ವಾಸ ವೈದ್ಯ ಅವರ ನೇತೃತ್ವದಲ್ಲಿ ಗೌರವಿಸಲಾಯಿತು.
ಪ್ರಮುಖವಾಗಿ ಸಂಘದ ನೂತನ ಸಹ ಕಾರ್ಯದರ್ಶಿಗಳಾದ ಜಯಕುಮಾರ್ ಹೆಬಳಿ, ಸೇರಿದಂತೆ ಪ್ರಮುಖ ಪದಾಧಿಕಾರಿಗಳಾದ ರಮೇಶ ಗೋಣಿ, ಕೃಷ್ಣಾ ರಾಚಣ್ಣವರ, ಹನಮಂತ ಪೆಟ್ಲೂರ, ಪ್ರಶಾಂತ ಹಂಪಣ್ಣವರ, ಫಕೀರ್ಪ ನವಲಗುಂದ, ಮುಂತಾದವರನ್ನು ಸನ್ಮಾನಿಸಲಾಯಿತು.ಈ ಸಮಾರಂಭದಲ್ಲಿ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು, ತಾಲೂಕು ವೈದ್ಯಾಧಿಕಾರಿ ಡಾ. ಶ್ರೀಪಾದ್ ಸಬನಿಸ್, ಪ್ರಮುಖರಾದ ಗೀರೀಶ್ ಮುನವಳ್ಳಿ, ಯುವ ಧುರೀಣ ಅಶ್ವಥ್ ವೈದ್ಯ, ಬಸವರಾಜ ಪ್ರಭುನವರ ಸೇರಿದಂತೆ ಹಲವು ಗಣ್ಯರು ಹಾಗೂ ಸವದತ್ತಿ ತಾಲೂಕಿನ ಸಮಸ್ತ ಶಿಕ್ಷಕ,ಹಾಗೂ ಶಿಕ್ಷಕಿಯರು, ವೃಂದದವರು, ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 