ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯ ಕಾಮಗಾರಿಗಳನ್ನು ಕಾಲ ಕಾಲಕ್ಕೆ ಪರೀಶೀಲಿಸುವಂತೆ ಶಾಸಕರ ಸೂಚನೆ

ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯ ಕಾಮಗಾರಿಗಳನ್ನು ಕಾಲ ಕಾಲಕ್ಕೆ ಪರೀಶೀಲಿಸುವಂತೆ ಶಾಸಕರ ಸೂಚನೆ MLA instructs officials to periodically review works within their scope of work


           ಹುಬ್ಬಳ್ಳಿ ಜ.17: ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ನಡೆಯುವ ಕಾಮಗಾರಿಗಳನ್ನು ಕಾಲಕಾಲಕ್ಕೆ ಪರೀಶೀಲಿಸಬೇಕು ಎಂದು ಶಾಸಕರಾದ ಎನ್‌.ಎಚ್‌.ಕೋನರಡ್ಡಿ ಹಾಗೂ ಎಂ.ಆರ್‌.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.  ಇಂದು ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರೀಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.  ಜಲಜೀವನ್ ಮಿಷನ್ ಕಾಮಗಾರಿಗಳು ಸಮರ​‍್ಕವಾಗಿ ಅನುಷ್ಠಾನವಾಗಿರುವುದಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ನಳಗಳ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ. ಶೀಘ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಒದಗಿಸಬೇಕು. ಈಗಾಗಲೇ ಕಾಲುವೆ ಮೂಲಕ ಮಲಪ್ರಭಾ ನೀರು ಹರಿಸಲಾಗುತ್ತಿದ್ದು, ಗ್ರಾಮ ಪಂಚಾಯತಿಗಳಲ್ಲಿ ಇರುವಂತಹ ಕುಡಿಯುವ ನೀರಿನ ಕೆರೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಬೆಣ್ಣೆ ಹಳದ ಕಾಮಗಾರಿ ನಡೆಯಲಿದೆ ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.  

              ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿ ಸಸಿ ನೆಡೆದೆ, ರಸ್ತೆಯ ಪಕ್ಕದಲ್ಲಿ ಸಸಿಗಳನ್ನು ನೆಡಬೇಕು. ರೈತರಿಗೆ ಉಪಯುಕ್ತವಾಗುವಂತ ಸಸಿಗಳನ್ನು ನೆಡುವಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಅದರಲ್ಲೂ ಬೇವು, ನೇರಳೆ, ಹುಣಸೆ ಸೇರಿದಂತೆ ಇತರ ಸಸಿಗಳನ್ನು ನೆಡಬೇಕಿದೆ. ಸ್ಮಶಾನ ಪ್ರದೇಶ ಹಾಗೂ ಹೊಸ ಚಕ್ಕಡಿ ರಸ್ತೆಗಳಲ್ಲಿ ಸಹ ಸಸಿಗಳನ್ನು ನೆಡಬೇಕು. ಸೇಬು ಬೆಳೆಯುವಂತೆ ರೈತರಿಗೆ ಪ್ರೋತ್ಸಾಹ ನೀಡಬೇಕು. ಅಲ್ಲದೆ ಹೊಸ ತಳಿಯ ಬೆಳೆಗಳನ್ನು ರೈತರು ಬೆಳೆಯುವಂತೆ ಪ್ರೇರೇಪಿಸಬೇಕಾಗುತ್ತದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಶಾಸಕರು ಸೂಚಿಸಿದರು. ಈಗಾಗಲೇ ಎಸ್‌.ಎಸ್‌.ಎಲ್‌.ಸಿ ಪೂರ್ವಭಾವಿ ಪರೀಕ್ಷೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ಮೊದಲ ಪೂರ್ವಭಾವಿ ಪರೀಕ್ಷೆಗಳು ಮುಕ್ತಾಯಗೊಂಡಿವೆ. ಎಸ್‌.ಎಸ್‌.ಎಲ್‌.ಸಿ ಮುಖ್ಯ ಪರೀಕ್ಷೆಯಲ್ಲಿ ಧಾರವಾಡ ಜಿಲ್ಲೆಯ ಅತ್ಯುನ್ನತ ರ???ಂಕ್ ಪಡೆಯಬೇಕು. ಬೆಳಗ್ಗೆ ಮತ್ತು ರಾತ್ರಿ 2 ಗಂಟೆಗಳ ಕಾಲ ಪಾಲಕರು ಮೊಬೈಲ್ ಟಿವಿ ಬಳಸದಂತೆ ಪಾಲಕರಲ್ಲಿ ಮನವಿ ಮಾಡಬೇಕು. ಆ ಮೂಲಕ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ತಮ ತಯಾರಿ ನಡೆಸಬೇಕಿದೆ. ಶಾಲೆಗಳ ಅಭಿವೃದ್ಧಿಗೆ ದಾನಿಗಳು ಸಾಕಷ್ಟು ಕೊಡುಗೆಯನ್ನು ನೀಡಿರುವ ನಿರ್ದಶನಗಳಿವೆ. ಹಳೆ ವಿದ್ಯಾರ್ಥಿಗಳು ಸಹ ಶಾಲೆಗಳ ಅಭಿವೃದ್ಧಿಗೆ ಸಹಕರಿಸುತ್ತಾರೆ ಎಂದರು.  

              ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯನ್ನು ವಿಳಂಬ ಮಾಡದೆ ತುರ್ತಾಗಿ ಪೂರ್ಣಗೊಳಿಸಬೇಕು. ತೋಟಗಾರಿಕೆ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಪ್ರೋತ್ಸಾಹ ನೀಡಬೇಕು. ಪಶು ಚಿಕಿತ್ಸಾಲಯಗಳಲ್ಲಿ ಇರುವ ಸಮಸ್ಯೆಗಳ ಬಗ್ಗೆ ವರದಿ ಸಲ್ಲಿಸಬೇಕು. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಅಧಿಕಾರಿಗಳು ಹೊಸ ವಸತಿ ನಿಲಯಗಳಿಗೆ ಪ್ರಸ್ತಾವನೆಯನ್ನು ನೀಡಬೇಕಿದೆ. ಗೃಹ ಆರೋಗ್ಯ ಯೋಜನೆಯು ಜಾರಿಯಲ್ಲಿದ್ದು, ವೈದ್ಯರು ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆಯನ್ನು ಮಾಡಲಿದ್ದಾರೆ. ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜನವರಿ 24ರಂದು ಹಲವು ಯೋಜನೆಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಶಾಸಕರು ಸಭೆಯಲ್ಲಿ ತಿಳಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಮೌನಾಚರಣೆ ಮಾಡುವ ಮೂಲಕ ಸಂತಾಪ ಸಲ್ಲಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ವರದಿಗಳನ್ನು ಸಭೆಯಲ್ಲಿ ವಾಚಿಸಿದರು. ಸಭೆಯಲ್ಲಿ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಡಾ.ರಾಮಚಂದ್ರ ಹೊಸಮನಿ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಜೆ.ಬಿ.ಮಜ್ಜಗಿ, ಹುಬ್ಬಳ್ಳಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶಿವಾನಂದ ಭೂಮಣ್ಣವರ, ಕೆಡಿಪಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.