ಲೋಕದರ್ಶನ ವರದಿ
ಗಂಗಾವತಿ 19: ಹಡಪದ ಸಮಾಜದವರ ಅಭಿವೃದ್ದಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ ನಡೆಸುತ್ತಿರುವ ಹಡಪದ ಸಮಾಜದವರ ಹೋರಾಟಕ್ಕೆ ಶಾಸಕ ಪರಣ್ಣ ಮುನವಳ್ಳಿ ತಮ್ಮ ಬೆಂಬಲ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದ ಹೊರಗಡೆ ಮಂಗಳವಾರ ಹಡಪದ ಸಮಾಜದವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನವಿ ಸ್ವೀಕರಿಸಿ ಮಾತನಾಡಿದರು.
ಈ ವಿಷಯವನ್ನು ಬೆಳಗಾವಿಯಿಂದ ದೂರವಾಣಿ ಮೂಲಕ ವಿಶ್ವವಾಣಿಯೊಂದಿಗೆ ಮಾತನಾಡಿ ತಿಳಿಸಿದ ಶಾಸಕ ಮುನವಳ್ಳಿಯವರು ಹಡಪದ ಸಮಾಜದವರ ಅಭಿವೃದ್ದಿಗೆ ಪ್ರತ್ಯೇಕ ನಿಗಮ ಸ್ಥಾಪಿಸುವ ಅವಶ್ಯಕತೆ ಇದೆ. ಇವರು ಮಾಡುತ್ತಿರುವ ಹೋರಾಟಕ್ಕೆ ತಮ್ಮ ಬೆಂಬಲ ಇದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಅನ್ನಾರಾವ್ ನರಿಗೋಳ್, ವೀರಣ್ಣ ಹಡಪದ ಮತ್ತು ಸಮಾಜದ ಪೀಠಾಧಿಪತಿಗಳು ಪಾಲ್ಗೊಂಡಿದ್ದರು.