ಮನರೇಗಾ ಕೂಲಿಕಾರರು ಇ-ಕೆವೈಸಿ ಮಾಡಿಸಿ: ಡಾ. ಭೀಮಾಶಂಕರ ಕನ್ನೂರ
MNREGA workers should do e-KYC: Dr. Bhimashankar Kannur
ಮನರೇಗಾ ಕೂಲಿಕಾರರು ಇ-ಕೆವೈಸಿ ಮಾಡಿಸಿ: ಡಾ. ಭೀಮಾಶಂಕರ ಕನ್ನೂರ
ಇಂಡಿ 07: ಮಹಾತ್ಮಗಾಂಧಿರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಎಲ್ಲ ಸಕ್ರಿಯ ಕೂಲಿಕಾರರು ಇ-ಕೆವೈಸಿ ಯನ್ನು ಎನ್.ಎಮ್.ಎಮ್.ಎಸ್. ಆಪ್ ಮೂಲಕ ಅಪ್ಡೇಟ್ ಮಾಡಿಕೊಳ್ಳಬೇಕು ಎಂದು ತಾಲೂಕ ಪಂಚಾಯತ ಇಂಡಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭೀಮಾಶಂಕರ ಕನ್ನೂರ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮನರೇಗಾ ಯೋಜನೆಯಲ್ಲಿ ಕೂಲಿಕಾರರ ಹಾಜರಾತಿಗೆ ಸಂಬಂಧಿಸಿದಂತೆ ಪಾರದರ್ಶಕ ತರುವ ನಿಟ್ಟಿನಲ್ಲಿ ಇ-ಕೆವೈಸಿ (ಉದ್ಯೋಗ ಚೀಟಿಯೊಂದಿಗೆ ಆಧಾರ ಲಿಂಕ್) ಮೂಲಕ ಕೂಲಿಕಾರರ ಮಾಹಿತಿಯನ್ನು ಅಪ್ಡೇಟ್ ಮಾಡಲಾಗುತ್ತಿದೆ. ತಾಲೂಕಿನ 38 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 50,119 ಜನ ಸಕ್ರಿಯ ಕೂಲಿಕಾರರ ಇ-ಕೆವೈಸಿ ಮಾಡಲಾಗುತ್ತಿದೆ. ಇದಕ್ಕೆ ಅಗತ್ಯ ಮಾಹಿತಿಗಳಾದ ಉದ್ಯೋಗ ಚೀಟಿ ಮತ್ತು ಆಧಾರ ಕಾರ್ಡಗಳನ್ನು ಕೂಲಿಕಾರರು ಗ್ರಾಪಂ ಸಿಬ್ಬಂದಿಗೆ ಒದಗಿಸಬೇಕು. ಈಗಾಗಲೇ ತಾಲೂಕಿನಲ್ಲಿ ಇಲ್ಲಿಯವರೆಗೆ ಅಂದಾಜು 500 ಕ್ಕೂ ಹೆಚ್ಚು ಜನ ಕೂಲಿಕಾರರ ಇ-ಕೆವೈಸಿ ಮೂಲಕ ಮಾಹಿತಿಯನ್ನು ಅಪಡೇಟ್ ಮಾಡಿಕೊಂಡಿದ್ದಾರೆ. ಎಲ್ಲ ನೊಂದಾಯಿತ ಸಕ್ರಿಯ ಕೂಲಿಕಾರರು ಅಕ್ಟೋಬರ್-31 ರೊಳಗಾಗಿ ಇ-ಕೆವೈಸಿ ಮಾಡಿಸುವುದು ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತಿಗೆ ಬೇಟಿ ನೀಡಲು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 