ರೈತರಿಗೆ ರಸಗೊಬ್ಬರ ಕೊರತೆಯ ಸಮಸ್ಯೆ ಪರಿಹರಿಸಲು ಸಂಸದ ಈ.ತುಕಾರಾಮ್ ಪ್ರಯತ್ನ
MP E. Tukaram's efforts to solve the problem of fertilizer shortage for farmers
ಬಳ್ಳಾರಿ 24 :ಜಿಲ್ಲೆಯ ರೈತರಿಗೆ ಮುಂಗಾರು ಬಿತ್ತನೆಯ ಬೇಡಿಕೆಗೆ ತಕ್ಕಂತೆ ಯೂರಿಯಾ ಮತ್ತು ಇತರೆ ರಸಗೊಬ್ಬರ ಪೂರೈಕೆಯಾಗದೇ ಕೃಷಿ ಚಟುವಟಿಕೆಗಳಿಗೆ ತುಂಬಾ ಅನಾನುಕೂಲ ಆಗುತ್ತಿರುವ ಬಗ್ಗೆ ಅಖಂಡ ಬಳ್ಳಾರಿ ಜಿಲ್ಲೆಯ ಸಂಸದರಾದ ಈ.ತುಕಾರಾಮ್ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಬಳ್ಳಾರಿ ಜಿಲ್ಲೆಯ ರೈತ ಸಮುದಾಯಕ್ಕೆ ಯೂರಿಯಾ ಮತ್ತು ಇತರೆ ರಸಗೊಬ್ಬರಗಳನ್ನು ಟ್ರ್ಯಾಕ್ ಸಂಖ್ಯೆ:08 ರಲ್ಲಿ ಮಾತ್ರ ಇಳಿಸಲಾಗುತ್ತಿರುವುದರಿಂದ ರೈತರಿಗೆ ಯಾವುದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಮನವರಿಕೆ ಮಾಡಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಕೋರಿದರು.
ಇದಕ್ಕೆ ಸಚಿವ ವಿ.ಸೋಮಣ್ಣ ಅವರು ಸಂಸದ ಈ.ತುಕಾರಾಮ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಕೂಡಲೇ ಬಳ್ಳಾರಿ ರೈಲ್ವೇ ನಿಲ್ದಾಣದ (ಜಂಕ್ಷನ್) ಟ್ರ್ಯಾಕ್ ಸಂಖ್ಯೆ: 06 ಮತ್ತು 08 ರಲ್ಲಿ ರಸಗೊಬ್ಬರಗಳನ್ನು ಇಳಿಸುವುದಕ್ಕೆ (ಅನ್‌ಲೋಡಿಂಗ್) ಅನುಮತಿ ನೀಡಿ ಬಳ್ಳಾರಿ ಜಿಲ್ಲೆಯ ಎಲ್ಲಾ ರೈತರಿಗೆ ಬೇಡಿಕೆ ಇರುವ ರಸಗೊಬ್ಬರ ಪೂರೈಕೆಗೆ ಸಮಸ್ಯೆಯಾಗದಂತೆ ಪರಿಹರಿಸುವುದಾಗಿ ತಿಳಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 