ಹುಡೇಂ ಗ್ರಾಮದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ಸ್ಥಾಪನೆಗೆ ಸಂಸದ ಈ. ತುಕಾರಾಂ ಮನವಿ

ಹುಡೇಂ ಗ್ರಾಮದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ಸ್ಥಾಪನೆಗೆ ಸಂಸದ ಈ. ತುಕಾರಾಂ ಮನವಿ  MP E. Tukaram appeals for establishment of Ekalavya model residential school in Hudem village

ವಿಜಯನಗರ(ಹೊಸಪೇಟೆ) 13:   ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಹುಡೇಂ ಗ್ರಾಮದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರು ಮಾಡುವಂತೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ. ತುಕಾರಾಂ ಅವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುವೆಲ್ ಓರಾಮ್ ಅವರಿಗೆ ಮನವಿ ಸಲ್ಲಿಸಿದರು.  ಕೂಡ್ಲಿಗಿ ತಾಲ್ಲೂಕು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಅತೀ ಹಿಂದುಳಿದ ಪ್ರದೇಶವಾಗಿದೆ. ಆದ್ದರಿಂದ ಈ ಭಾಗದಲ್ಲಿ ವಸತಿ ಶಾಲೆಯ ಆರಂಭಿಸುವ ಅಗತ್ಯವಿದ್ದು, ಏಕಲವ್ಯ ವಸತಿ ಶಾಲೆ ಸ್ಥಾಪನೆಯಿಂದ ಭವಿಷ್ಯದ ಪೀಳಿಗೆ ಸಾಕಷ್ಟು ಶೈಕ್ಷಣಿಕ ಪ್ರಗತಿ ಸಾಧಿಸಲು ಅನುಕೂಲವಾಗಲಿದೆ ಎಂದು ವಿವರಿಸಿದ್ದಾರೆ. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಕೂಡಲೇ ಅನುಮೋದನೆ ನೀಡುವ ಭರವಸೆ ನೀಡಿದರು.  ಸಂಸದರ ಈ ಕಾರ್ಯಕ್ಕೆ ಸ್ಥಳೀಯ ಮುಖಂಡರು, ಶಿಕ್ಷಣ ಪ್ರೇಮಿಗಳು ಮತ್ತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.