ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್
MP E. Tukaram received a complaint from the public
ಬಳ್ಳಾರಿ 25: ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಬುಧವಾರ ನಗರದ ಜಿಪಂ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ಶಾಲೆ, ಶಿಕ್ಷಣ, ಆರೋಗ್ಯ, ವಸತಿ, ಕಂದಾಯ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು.ಈ ವೇಳೆ ಮಾತನಾಡಿದ ಅವರು ಸಕಾಲದಲ್ಲಿ ಅಹವಾಲುಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಹೇಳಿದರು.ಇದಕ್ಕೂ ಮುನ್ನ ಸಂಸದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ವೀಲ್ ಚೇರ್, ತೋಟಗಾರಿಕೆ ಇಲಾಖೆಯಿಂದ ಎನ್‌ಹೆಚ್‌ಎಂ, ಪಿಎಂಕೆಎಸ್‌ವೈ ಯೋಜನೆಯಡಿ ಫಲಾನುಭವಿಗಳಿಗೆ ಟ್ರ್ಯಾಕ್ಟರ್, ಟ್ರ್ಯಾಕ್ಟರ್ ಟ್ರ್ಯಾಲಿ, ಟ್ರ್ಯಾಕ್ಟರ್ ಚಾಲಿತ ಸ್ಪೇಯರ್, ಹನಿ ನೀರಾವರಿ, ಸೋಲಾರ್ ಪಂಪ್ ಸೆಟ್ ವಿತರಣೆಯ ಆದೇಶ ಪ್ರತಿ ವಿತರಿಸಿದರು.
ಬಳಿಕ ಸುಕನ್ಯಾ ಸಮೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್ ಆದೇಶ ಪ್ರತಿ, ಸಂಡೂರು ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ನೇಮಕಗೊಂಡವರಿಗೆ ಆದೇಶ ಪ್ರತಿ, ಆಯುಷ್ ಇಲಾಖೆಯಿಂದ ಕಿಟ್ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್. ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪೆನ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ- ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 