ಸರ್ಕಾರದ ವಾರ್ಷಿಕ ಯೋಜನೆ ಸಮರ್ಕ ಅನುಷ್ಠಾನಕ್ಕೆ ಸಂಸದ ಜಗದೀಶ್ ಶೆಟ್ಟರ್ ಸೂಚನೆ
MP Jagadish Shettar instructs for effective implementation of government's annual plan
ಬೆಳಗಾವಿ 19: ಕೃಷಿ, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳು, ಶಿಕ್ಷಣ, ವಸತಿ, ಮತ್ತು ಸ್ವಯಂ ಉದ್ಯೋಗಗಳಿಗೆ ಹೆಚ್ಚಿನ ಸಾಲ ಒದಗಿಸಬೇಕು. ಸರ್ಕಾರದ ವಿವಿಧ ಜನಕಲ್ಯಾಣ ಹಾಗೂ ಸಬ್ಸಿಡಿ ಆಧಾರಿತ ಸಾಲ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮಪರ್ಕವಾಗಿ ತಲುಪಿಸಬೇಕು ಎಂದು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಜೂ.19) ಜಿಲ್ಲಾ ಸಲಹಾ ಸಮಿತಿ,ಜಿಲ್ಲಾ ಮಟ್ಟದ ಪರೀಶೀಲನಾ ಸಮಿತಿ ಸಭೆ (ಡಿ.ಸಿ.ಸಿ. ಡಿ.ಎಲ್.ಆರ್.ಸಿ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರದ ವಿವಿಧ ಇಲಾಖೆಗಳ ಜನಪರ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸುವಲ್ಲಿ ಬ್ಯಾಂಕುಗಳು ನೀರಿಕ್ಷಿತ ಮಟ್ಟದಲ್ಲಿ ಗುರಿ ತಲುಪುವಲ್ಲಿ ವಿಫಲವಾಗಿವೆ. ಸರಕಾರದ ವತಿಯಿಂದ ವಿವಿಧ ಯೋಜನೆಗಳಡಿ ಬಿಡುಗಡೆಯಾಗುವಂತಹ ಸಹಾಯಧನ ಸೌಲಭ್ಯ ಹಾಗೂ ಸಾಲ ಸೌಲಭ್ಯಗಳು ಫಲಾನುಭವಿಗಳಿಗೆ ಕಾಲಮಿತಿಯೊಳಗೆ ವಿತರಣೆಯಾಗಬೇಕು. ಈ ಕಾರ್ಯದಲ್ಲಿ ಗುರಿ ಸಾಧಿಸದೆ ಇರುವಂತಹ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸೂಚನೆ ನೀಡಿದರು.
ವಿವಿಧ ಸರ್ಕಾರಿ ಇಲಾಖೆಗಳಿಂದ ಬ್ಯಾಂಕುಗಳಿಗೆ ಸಬ್ಸಿಡಿಗಾಗಿ ಬಂದಿರುವ ಫಲಾನುಭವಿಗಳ ಸಾಲದ ಅರ್ಜಿಗಳನ್ನು ಅನಗತ್ಯವಾಗಿ ಬಾಕಿ ಇಟ್ಟುಕೊಳ್ಳದೆ ತಕ್ಷಣ ವಿಲೇವಾರಿ ಮಾಡಬೇಕು. ಸ್ವಯಂ ಉದ್ಯೋಗ ಮಾಡುವಂತಹ ಜನರಿಗೆ ಬ್ಯಾಂಕುಗಳಿಂದ ಸಾಲಸೌಭ್ಯಗಳು ತ್ವರಿತವಾಗಿ ದೊರೆಯಬೇಕು. ಬ್ಯಾಂಕುಗಳಿಂದ ಸಿ.ಎಸ್.ಆರ್. ಅನುದಾನದಡಿ ಕೈಗೊಳ್ಳಲಾಗುವ ಚಟುವಟಿಕೆಗಳಲ್ಲಿ ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳುವುದರ ಜೊತೆಗೆ ಕಳೆದ ಸಾಲಿನಲ್ಲಿ ಸಿ.ಎಸ್.ಆರ್. ಅನುದಾನದಡಿ ಕೈಗೊಳ್ಳಲಾದ ಚಟುವಟಿಕೆಗಳ ವರದಿ ನೀಡುವಂತೆ ಸೂಚಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 