ಪ್ರಧಾನಿ ಮೋದಿ ಸರ್ಕಾರವನ್ನು ಅಭಿನಂದಿಸಿದ ಸಂಸದ ರಮೇಶ ಜಿಗಜಿಣಗಿ
MP Ramesh Jigajinagi congratulates Prime Minister Modi's government
ಪ್ರಧಾನಿ ಮೋದಿ ಸರ್ಕಾರವನ್ನು ಅಭಿನಂದಿಸಿದ ಸಂಸದ ರಮೇಶ ಜಿಗಜಿಣಗಿ
ವಿಜಯಪುರ 04: ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಜಾಗತಿಕ ಸವಾಲುಗಳನ್ನು ಮೆಟ್ಟಿ ನಿಂತು ದೇಶವನ್ನು ಅಭಿವೃದ್ಧಿಯ ಮುಂಚೂಣಿಗೆ ಕೊಂಡೊಯ್ದಿದೆ, ಇದರ ಜೊತೆ ಜೊತೆಗೇ ಸಾಮಾಜದ ಕಟ್ಟಕಡೆಯ ಜನರೂ ಆರ್ಥಿಕ ಚೈತನ್ಯ ಹೊಂದಲು ಹತ್ತು- ಹಲವು ಯೋಜನೆಗಳನ್ನು ರೂಪಿಸಿದೆ ಓಂ ಮೂಲಕ ಸ್ವಾವಲಂಬಿ ಭಾರತದ ಸಂಕಲ್ಪ, ವಿಕಸಿತ ಭಾರತದ ಯೋಜನೆಗಳು ಸಾಕಾರಗೊಳ್ಳಲು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಜನಸಾಮಾನ್ಯರಿಗೆ ’ತೆರಿಗೆ ಹೊರೆ ಹೆಚ್ಚಿಸುವುದು ಆದ್ಯತೆಯಲ್ಲ, ಇಳಿಸುವುದು ನಮ್ಮ ಕಾಳಜಿ’ ಎಂದು ಪರಿಭಾವಿಸಿ ನೂತನ ಉಖಖಿ ದರ ಜಾರಿಗೆ ತರುವ ಮೂಲಕ ದಸರಾ ಹಾಗೂ ದೀಪಾವಳಿ ಉಡುಗೊರೆ ನೀಡಿರುವ ಹೆಮ್ಮೆಯ ಪ್ರಧಾನಿ ಮೋದಿ ಜೀ ಅವರ ನೇತೃತ್ವದ ಸರ್ಕಾರವನ್ನು ನಾಡಿನ ಜನಸಾಮಾನ್ಯರ ಪರವಾಗಿ ಅಭಿನಂದಿಸುವೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.
ದೇಶದ ರೈತರು, ಸಣ್ಣ ಮತ್ತು ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು ಈ ಸುಧಾರಣೆಗಳಿಂದ ಪ್ರಯೋಜನ ಪಡೆಯುವುದರ ಜೊತೆಗೆ ಸಣ್ಣ ವ್ಯಾಪಾರಿಗಳು, ಮತ್ತು ಉದ್ಯಮಿಗಳು ವ್ಯಾಪಾರ ಮಾಡುವುದು ಸುಲಭವಾಗುವ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸುತ್ತದೆ. ಸಾಮಾನ್ಯ ಜನರ ಜೀವನವನ್ನು ಸರಳಗೊಳಿಸುವುದು ಮತ್ತು ಸಣ್ಣ ವ್ಯವಹಾರಗಳಿಗೆ ವ್ಯಾಪಾರ ವಾತಾವರಣವನ್ನು ಸುಧಾರಿಸುವುದು ಈ ಸುಧಾರಣೆಗಳ ಉದ್ದೇಶವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 