ಬೆಂಗಳೂರು 31: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ಮೂಲದ ಗಾಯಕಿ, ಭರತನಾಟ್ಯ ಕಲಾವಿದಯೂ ಆಗಿರುವ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಲಿದ್ದಾರೆ
ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಅವರ ಎರಡೂ ಕುಟುಂಬಗಳು ಈಗಾಗಲೇ ಮಾತುಕತೆ ನಡೆಸಿ ಮದುವೆಗೆ ಒಪ್ಪಿಗೆ ನೀಡಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿರುವ ಶಿವಶ್ರೀ ಸ್ಕಂದಪ್ರಸಾದ್, ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ.
2025 ರ ಮಾರ್ಚ್ ನಲ್ಲಿ ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್ ವಿವಾಹ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.