ಬಳ್ಳಾರಿ, ಏ.24: ಕೋರ್ ಝೋನ್ ಮತ್ತು ಬಫರ್ ಝೋನ್ ಇರುವ ನಗರದ ಗುಗ್ಗರಹಟ್ಟಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳು ಹಾಗೂ ವಾಣಿಜ್ಯ ಇಲಾಖೆಯ ಆಯುಕ್ತರಾದ ಎಂ.ಎಸ್.ಶ್ರೀಕರ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಸರಕಾರದ ನಿಯಮಾವಳಿ ಅನ್ವಯ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಇದುವರೆಗೆ ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು.
ಮನೆ ಮನೆ ಸಮೀಕ್ಷೆ ನಡೆಸುತ್ತಿರುವ ಸಿಬ್ಬಂದಿಗೆ ಸಮರ್ಪಕವಾದ ಸೌಲಭ್ಯಗಳು ಒದಗಿಸಲಾಗುತ್ತಿದೆಯೇ ಎಂಬುದನ್ನು ಮತ್ತು ಜನರಿಗೆ ಅವಶ್ಯಕ ವಸ್ತುಗಳ ಲಭ್ಯತೆ ನಿಟ್ಟಿನಲ್ಲಿ ಯಾವ ಕ್ರಮಗಳನ್ನು ಅನುಸರಿಸಲಾಗಿದೆ ಎಂಬುದನ್ನು ವಿವರಿಸಿದರು.
ಪ್ರೊಬೆಷನರಿ ಐಎಎಸ್ ಈಶ್ವರ್ ಕಾಂಡೂ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ತಹಸೀಲ್ದಾರ್ ನಾಗರಾಜ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಇದ್ದರು.