ಮಾ. 9ರಂದು ಸಂತ ಸೇವಾಲಾಲ್ ಜಯಂತಿ

ಕೊಪ್ಪಳ 03: ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಸಕರ್ಾರದ ನಿರ್ದೇಶನದಂತೆ ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. 

ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಮಾರ್ಚ  09 ರಂದು ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವುದು. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂತ ಸೇವಾಲಾಲ್ರವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಯಲಿದೆ. ಕಾರ್ಯಕ್ರಮದ ನಂತರ ವಿವಿಧ  ಕಲಾತಂಡಗಳೊಂದಿಗೆ ಸಂತ ಸೇವಾಲಾಲ್ರವರ ಭಾವಚಿತ್ರದ ಮೆರವಣಿಗೆಯು ಸಾಹಿತ್ಯ ಭವನದಿಂದ ಬಹದ್ದೂರಬಂಡಿವರೆಗೆ ಅದ್ದೂರಿಯಾಗಿ ಜರುಗಲಿದೆ.  ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಫೆ. 15ರಂದು ಸಂತ ಸೇವಾಲಾಲ್ ಅವರ ಜಯಂತಿ ಆಚರಿಸಬೇಕು. ಜಿಲ್ಲಾ ಕೇಂದ್ರದಲ್ಲಿ ಮಾರ್ಚ್  09 ರಂದು ಜಯಂತಿಯನ್ನು ಆಚರಿಸಲಾಗುವುದು.  ಕಾರ್ಯಕ್ರಮದ ದಿನದಂದು ನಗರಸಭೆಯಿಂದ ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಪೊಲೀಸ್ ಇಲಾಖೆಯಿಂದ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.   

ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕರಾದ ಸಿದ್ದರಾಮೇಶ್ವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಎನ್.ಜಿ. ಕನಕರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ಕೆ. ರಂಗಣ್ಣವರ, ಸಮುದಾಯದ ಮುಖಂಡರಾದ ಲಕ್ಷ್ಮಣ ಪವಾರ, ಪಂಪಣ್ಣ ಪೂಜಾರ, ಲಿಂಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.