ಬಸನಾಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಮಾದೇವಪ್ಪ
Madevappa visited Basanala Gram Panchayat
ಲೋಕದರ್ಶನ ವರದಿ
ಇಂಡಿ 21 : ತಾಲೂಕಿನ ಬಸನಾಳ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕೊಟ್ನಾಳ ಗ್ರಾಮಕ್ಕೆ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾದೇವಪ್ಪ ಏವೂರ ಅವರು ಬೇಟಿ ನೀಡಿ ಗ್ರಾಮದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಕಾಮಗಾರಿಗೆ ಪರೀಶೀಲನೆ ನಡೆಸಿದರು. ಅರ್ಜುನ ಗೋಡೆಕರ್ ಇವರ ಹೊಲದಿಂದ ದೇಶಮುಖ ಹೊಲದ ವರೆಗೆ ಕೆರೆಯ ಕಾಲುವೆ ಹೂಳು ತೆಗೆಯುವ” ಕಾಮಗಾರಿ ಸ್ಥಳದಲ್ಲಿ ಒಟ್ಟು 20 ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದರು.
ಈ ವೇಳೆ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಮಾದೇವಪ್ಪ ಏವೂರ ಅವರು ಮಾತನಾಡಿ ಕೂಲಿಕಾರರೊಂದಿಗೆ ಸಂವಾದ ನಡೆಸಿ ಮನರೇಗಾ ಯೋಜನೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರು ಕೆಲಸಕ್ಕೆ ಆಗಮಿಸುವಂತೆ ಪ್ರೇರೇಪಿಸಿ, ಕೆಲಸದ ಬೇಡಿಕೆ ಪಡೆದು ಉದ್ಯೋಗ ಒದಗಿಸುವ ಕಾರ್ಯವನ್ನು ಸಮರ್ಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.ಇದೇ ವೇಳೆ ಓಒಒಖ ಫೇಸ್ ಅಥೆಂಟಿಕೇಶನ್ ಪರೀಶೀಲನೆ ನಡೆಸಿ, ಕೂಲಿಕಾರರ ಹಾಜರಾತಿ ದಾಖಲಾತಿಯನ್ನು ಸಮರ್ಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ (ಗ್ರಾಮೀಣ ಉದ್ಯೋಗ) ಸಂಜಯ ಖಡಗೇಕರ ಅವರು ಮಾತನಾಡಿ ಮನರೇಗಾ ಯೋಜನೆಯ ಉದ್ದೇಶ, ಕೂಲಿಕಾರರ ಹಕ್ಕುಗಳು, ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಹಾಗೂ ಕೆಲಸದ ಸ್ಥಳದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಮಾಹಿತಿ ನೀಡಿದರು. ಜೊತೆಗೆ ಫೇಸ್ ಅಥೆಂಟಿಕೇಶನ್ ಪರೀಶೀಲಿಸಿ, ಹಾಜರಾತಿ ದಾಖಲಾತಿಗಳನ್ನು ವೀಕ್ಷಿಸಿದರು.ಕೂಲಿಕಾರರಿಗೆ ಅಗತ್ಯವಾದ ಕುಡಿಯುವ ನೀರು, ನೆರಳು ಹಾಗೂ ಮೂಲಭೂತ ಸೌಲಭ್ಯಗಳನ್ನು ಸಮರ್ಕವಾಗಿ ಒದಗಿಸುವಂತೆ ಪಿಡಿಓ ರವರಿಗೆ ಸೂಚನೆ ನೀಡಿದರು.
ಕಾಮಗಾರಿ ಗುಣಮಟ್ಟ ಕಾಪಾಡುವ ಜೊತೆಗೆ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ತಮಗೆ ನೀಡಿರುವ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಿ, ಗ್ರಾಮದಲ್ಲಿನ ಇತರ ಕೂಲಿಕಾರರು, ತಮ್ಮ ಮನೆಯ ಸುತ್ತ ಮುತ್ತ, ಹಾಗೂ ತಮ್ಮ ಸಂಬಂಧಿಕರಿಗೂ ಮನರೇಗಾ ಯೋಜನೆಯಡಿ ಉದ್ಯೋಗಾವಕಾಶ ದೊರೆಯುವ ಕುರಿತು ಜಾಗೃತಿ ಮೂಡಿಸಿ ಎಂದು ತಿಳಿಸಿದರು. ಹಾಗೂ ಬೆಳಗ್ಗೆ ಬೇಗ ಕೆಲಸಕ್ಕೆ ಹಾಜರಾಗಿ ಬಿಸಿಲಿನ ತಾಪ ಹೆಚ್ಚುವುದರೊಳಗೆ ಕೆಲಸ ಮುಗಿಸಿ ಎಂದು ಸಲಹೆ ನೀಡಿದರು.ಮಾನವ ದಿನಗಳ ಸೃಜನೆ, ಜ-ಏಙಅ ಪ್ರಗತಿ ಹಾಗೂ ಕೂಲಿಕಾರರಿಂದ ನಮೂನೆ-6 ರಲ್ಲಿ ಕೆಲಸದ ಬೇಡಿಕೆ ಪಡೆದು ತಕ್ಷಣ ಕೆಲಸ ನೀಡುವ ಕುರಿತು ಪರೀಶೀಲನೆ ನಡೆಸಿದರು.
ಮನರೇಗಾ ಯೋಜನೆ ಕುರಿತು ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಅರ್ಹ ಕುಟುಂಬಗಳು ಯೋಜನೆಯ ಸದುಪಯೋಗ ಪಡೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಪಿಡಿಓ ರವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಬಸನಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಲ್ಲಿಕಾರ್ಜುನ ನಿಲಂಗಿ, ಐಇಸಿ ಸಂಯೋಜಕರು ರಾಮಗೌಡ ಸರಬಡಗಿ, ತಾಂತ್ರಿಕ ಸಹಾಯಕರು ಬಾಬು ನಾಯಕ, ಬೇರ್ ಪೂಟ್ ಟೆಕ್ನಿಷನ್ ಕಾಶಿನಾಥ ಬಡಿಗೇರ, ಗ್ರಾಮ ಕಾಯಕ ಮಿತ್ರ ಶ್ವೇತಾ ಸಂಜು ,ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 