ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್‍ ಲಕ್ನೋ ಆಸ್ಪತ್ರೆಗೆ ದಾಖಲು

ಲಕ್ನೋ, ಜೂನ್ 14, ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್ ಮೂತ್ರದ ತೊಂದರೆಯಿಂದ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಭಾನುವಾರ ಇಲ್ಲಿನ ಮೆದಾಂತ ಆಸ್ಪತ್ರೆಗೆ ದಾಖಲಾಗಿರುವ ಉತ್ತರ ಪ್ರದೇಶ ಮಾಜಿ ಸಚಿವರು ಮತ್ತು ಲಕ್ನೋ ಮಾಜಿ ಸಂಸದರೂ ಆದ ಟಂಡನ್‍ ಅವರು ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು  ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ತಿಳಿಸಿದ್ದಾರೆ.ರಾಜ್ಯಪಾಲರನ್ನು ಕೊವಿಡ್‍-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಮೂತ್ರಕೋಶಕ್ಕೆ ಸಂಬಂಧಿಸಿದ ತೊಂದರೆಗಳು ಮತ್ತು ಲಘು ಜ್ವರ ನಂತರ ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.ರಾಜ್ಯಪಾಲರ ಪುತ್ರ ಅಸುತೋಷ್ ಟಂಡನ್ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿದ್ದಾರೆ