ಮಡಿವಾಳ ಮಾಚಿದೇವ ಜಯಂತಿ : ಪೂರ್ವಸಿದ್ಧತಾ ಸಭೆ
Madiwala Machideva Jayanti: Preparatory meeting
ಗದಗ 20: ಮಡಿವಾಳ ಮಾಚಿದೇವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಪೂರ್ವಸಿದ್ಧತಾ ಸಭೆಯು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಮಡಿವಾಳ ಮಾಚಿದೇವರ ಜಯಂತಿಯನ್ನು ಫೆಬ್ರುವರಿ 2 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ತಾಲೂಕು ಮಟ್ಟದಲ್ಲಿಯೂ ಮಡಿವಾಳ ಮಾಚಿದೇವರ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸುವ ಕುರಿತು ಸಭೆ ಜರುಗಿಸಲು ಸೂಚಿಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಶಾಲೆ ಕಾಲೇಜುಗಳಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದ ದಿನದಂದು ಸನ್ಮಾನಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಬ್ಯಾನರ್ ಅಳವಡಿಕೆ, ಉಪನ್ಯಾಸಕರ ಆಯ್ಕೆ, ವೇದಿಕೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಗಣ್ಯರು, ಪ್ರಮುಖರು, ಹಿರಿಯರು , ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರಿಗೂ ಸ್ವಾಗತಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 