ಚೆನ್ನೈ, ನ 11 : ನ್ಯಾಯಮೂರ್ತಿ ಅಮರೀಶ್ವರ್ ಪ್ರತಾಪ್ ಸಾಹಿ ಸೋಮವಾರ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪ್ರಮಾಣವಚನ ಬೋಧಿಸಿದರು. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಮದ್ರಾಸ್ ಹೈಕೋರ್ಟ್ ಹಂಗಾಮಿ ಮುಖ್ಯನ್ಯಾಯಮೂರ್ತಿ ವಿನೀತ್ ಕೊಠಾರಿ, ನ್ಯಾಯಾಧೀಶರು, ಸಚಿವರು ಮತ್ತಿತರು ಸಮಾರಂಭದಲ್ಲಿ ಭಾಗಿಯಾಗಿದ್ದರು. ನ್ಯಾಯಮೂತರ್ಿ ಸಾಹಿ ಇದಕ್ಕೂ ಮುನ್ನ ಪಾಟ್ನಾ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.