ಮಹಾದಾಯಿ ವಿವಾದ : ಕೇಂದ್ರ ಮಧ್ಯಪ್ರವೇಶಿಸಲು ಜೆಡಿಎಸ್ ಒತ್ತಾಯ


ಬೆಳಗಾವಿ : ಕಳಸಾ ಬಂಡೂರಿ ಮತ್ತು ಮಹಾದಾಯಿ ನದಿ ನೀರು ಹಂಚಿಕೆ ವಿವಾದವನ್ನು ಕೇಂದ್ರ ಮುತುರ್ವಜಿ ವಹಿಸಿ ಬಗೆ ಹರಿಸಬೇಕೆಂದು ಆಗ್ರಹಿಸಿ ನಗರದಲ್ಲಿ ಶುಕ್ರವಾರ ನೂರಾರು ಜೆಡಿಎಸ್ ಕಾರ್ಯಕರ್ತರು ಸುವರ್ಣಸೌಧದದಿಂದ ಚನ್ನಮ್ಮ ಸರ್ಕಲ್ವರೆಗೆ ಪಾದಯಾತ್ರೆ ನಡೆಸುವ ಮೂಲಕ ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

ಶುಕ್ರವಾರ ಪಾದಯಾತ್ರೆ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ಮಾನ್ಯ ರಾಷ್ಟ್ರಪತಿಗಳು ಕೇಂದ್ರ ಸರಕಾರಕ್ಕೆ ಈ ಕುರಿತು ಸೂಚನೆ ನೀಡಬೇಕೆಂದು ಒತ್ತಾಯಿಸಿದರು.

ಉತ್ತರ ಕನರ್ಾಟಕದ ಜನರ ಬಹು ದಿನಗಳ ಬೇಡಿಕೆಯಾದ ಕಳಸಾ ಬಂಡೂರಿ ಮಹಾದಾಯಿ ನದಿ ನೀರು ಹಂಚಿಕೆ ಕಗ್ಗಂಟಾಗಿದ್ದು, ಇಲ್ಲಿನ ಜನರ ಕುಡಿಯುವ ನೀರು ಸಮಸ್ಯೆ ಬಗೆ ಹರಿಸಲು ಕೇಂದ್ರ ಸರಕಾರ ಕೂಡಲೇ ಮಧ್ಯ ಪ್ರವೇಶ ಮಾಡಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು.

ರೈತರ ಸಾಲ ಮನ್ನಾ ವಿಷಯದಲ್ಲಿಯೂ ಕೇಂದ್ರ ಸರಕಾರ ನಿರ್ಲಕ್ಷ್ಯ ಧೋರಣೆ ತಳೆದಿದ್ದು, ಉದ್ಯಮಿಗಳ ಸಾಲ ಮನ್ನಾ ಮಾಡಿದಂತೆ ರೈತ ಸಾಲಮನ್ನಾ ಮಾಡಲಿಲ್ಲ. ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಬಿಜೆಪಿ ಸರಕಾರ ಉತ್ತರ ಕನರ್ಾಟಕದ ಬಹು ದಿನಗಳ ಬೇಡಿಕೆ ಕಳಸಾ ಬಂಡೂರಿ ಮಹಾದಾಯಿ ನೀರು ಹಂಚಿಕೆ ವಿವಾದವನ್ನಾದರೂ ಮಧ್ಯ ಪ್ರವೇಶಿಸಿ ಬಗೆ ಹರಿಸಲಿ ಎಂದು ಒತ್ತಾಯಿಸಿದರು. 

ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ನೇತೃತ್ವದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.