ಮಹದಾಯಿ ನದಿ ಸ್ಥಳ ಪರಿಶೀಲನೆ: ಡಿಕೆಶಿ
ಬೆಂಗಳೂರು 28: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಮಹದಾಯಿ ನದಿ ಸ್ಥಳ ಪರಿಶೀಲನೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಾರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಭೆ ನಡೆಸಲಾಗುವುದು ಎಂದರು.
ಮಹದಾಯಿ ವಿಚಾರದಲ್ಲಿ ರಾಜ್ಯ ಸಕರ್ಾರ ಕೈಗೊಳ್ಳಬೇಕಾಗಿರುವ ಹೋರಾಟ ಕುರಿತಂತೆ ಮುಖ್ಯಮಂತ್ರಿಯೊಂದಿಗೆ ನಡೆಸುವ ಸಭೆಯಲ್ಲಿ ಚಚರ್ೆ ಮಾಡಲಾಗುವುದು. ಆನಂತರ ಮುಂದಿನ ಹೋರಾಟದ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಬೇರೆ ರಾಜ್ಯದ ಬಗ್ಗೆ ತಮಗೆ ಮಾಹಿತಿ ಇಲ್ಲ. ಆದರೆ, ಕನರ್ಾಟಕಕ್ಕೆ ಮಹದಾಯಿ ವಿಚಾರದಲ್ಲಿ ಅನ್ಯಾಯವಾಗಿದೆ. ನೆರೆಯ ಗೋವಾ ರಾಜ್ಯ ಏನಾದರು ಮಾಡಿಕೊಳ್ಳಲಿ. ನಾವು ನಮ್ಮ ರಾಜ್ಯದ ಹಿತ ಕಾಪಾಡಲು ಬದ್ಧ. ಇದಕ್ಕಾಗಿ ಯಾವುದೇ ತ್ಯಾಗಕ್ಕಾದರೂ ಸಿದ್ದರಿರುವುದಾಗಿ ಸಚಿವರು ಹೇಳಿದರು.
ಕಾನೂನು ಹೋರಾಟಕ್ಕೂ ನಾವು ಸಿದ್ದರಿದ್ದು, ಎಲ್ಲ ಪಕ್ಷದ ಮುಖಂಡರು ರಾಜ್ಯದ ಹಿತ ಕಾಪಾಡಲು ಮುಂದಾಗಬೇಕು. ಮಹದಾಯಿ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡುವುದು ಬೇಡ. ಎಲ್ಲರು ಒಟ್ಟಾಗಿ ಹೋರಾಟವನ್ನು ಮುಂದುವರೆಸೋಣ ಎಂದು ವಿರೋಧ ಪಕ್ಷಗಳಿಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 