ಮಹಾಕಾಳಿ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ: ಅನಂತಪುರದಲ್ಲಿ ಬಿರುಸಿನ ಮತದಾನ
Mahakali Cooperative Sugar Factory Election: Brisk voting in Ananthapura
ಸಂಬರಗಿ 06: ಮಹಾಕಾಳಿ ಸಹಕಾರಿ ಸಕ್ಕರೆ ಕಾರ್ಖಾನೆ ಕವಠೇಮಹಾಂಕಾಳದ ಚುನಾವಣಾ ಪ್ರಕ್ರಿಯೆ ಅನಂತಪುರದಲ್ಲಿ ಬಿರುಸಿನಿಂದ ನಡೆಯಿತು. ಕರ್ನಾಟಕದ ವಿವಿಧ ಭಾಗಗಳ ಸದಸ್ಯರಿಗಾಗಿ ಅನಂತಪುರದಲ್ಲಿ ಐದು ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 16 ಸ್ಥಾನಗಳಿಗೆ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅನಂತಪುರದ ಐದು ಮತಗಟ್ಟೆಗಳಲ್ಲಿ ಒಟ್ಟು 1,832 ಮತದಾರರಿದ್ದು, 995 ಮಂದಿ ಮತದಾನ ಮಾಡಿದ್ದಾರೆ. ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿ ನಡೆಯಿತು. ಮತಗಟ್ಟೆಗಳಲ್ಲಿ ಮತದಾರರು ಹಾಗೂ ಅಧಿಕಾರಿಗಳ ನಡುವೆ ಕೆಲಕಾಲ ವಾಗ್ವಾದ ನಡೆದಿದ್ದು, ಚುನಾವಣಾ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಂಡಿತು. ಮತದಾನ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಸೇರಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಅಂಗವಿಕಲರು, ವೃದ್ಧರು ಸೇರಿದಂತೆ ಎಲ್ಲ ಮತದಾರರಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿತ್ತು. ಮತದಾರರ ಅನುಕೂಲಕ್ಕಾಗಿ ಕನ್ನಡ ಮತ್ತು ಮರಾಠಿ ಭಾಷೆಯಲ್ಲೂ ಸೂಚನೆಗಳನ್ನು ಅಳವಡಿಸಲಾಗಿತ್ತು. ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಡುವೆ ತೀವ್ರ ಸ್ಪರ್ಧೆ ಏರ್ಪಟಟಿದ್ದು, ಎರಡೂ ಬಣಗಳ ಮುಖಂಡರು ಹಾಗೂ ಕಾರ್ಯಕರ್ತರು ಮತದಾರರನ್ನು ತಮ್ಮ ಪರವಾಗಿ ಸೆಳೆಯಲು ಪ್ರಯತ್ನಿಸಿದರು. ಅಭ್ಯರ್ಥಿಗಳು ಬೆಳಗ್ಗೆಯಿಂದಲೇ ಮತದಾರರನ್ನು ಭೇಟಿ ಮಾಡಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಚುನಾವಣಾ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಅಥಣಿ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಮತದಾನ ಕೇಂದ್ರಗಳ ಸುತ್ತಮುತ್ತ ಪೊಲೀಸರು ಕಟ್ಟುನಿಟ್ಟಿನ ಭದ್ರತೆ ಕೈಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 