ಮಹಾಕಾಳಿ ಸಕ್ಕರೆ ಕಾರ್ಖಾನೆ ಚುನಾವಣೆ ಸೆ. 6ರಂದು

ಮಹಾಕಾಳಿ ಸಕ್ಕರೆ ಕಾರ್ಖಾನೆ ಚುನಾವಣೆ ಸೆ. 6ರಂದು  Mahakali Sugar Factory election on September 6


ಸಂಬರಗಿ: ಮಹಾರಾಷ್ಟ್ರದ ಮಹಾಕಾಳಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ಸೆ. 6ರಂದು ಚುನಾವಣೆ ನಡೆಯಲಿದೆ ಎಂದು ಸಾಂಗ್ಲಿ ಜಿಲ್ಲಾಧಿಕಾರಿ ಡಾ. ಮೈನಾಕ್ ಘೋಷ್ ತಿಳಿಸಿದ್ದಾರೆ. ಅಥಣಿ ತಾಲ್ಲೂಕಿನ ಈ ಭಾಗದಲ್ಲಿ 1,800 ಮತದಾರರಿದ್ದು, ಅನಂತಪುರದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಐದು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಶಾಂತಿಯುತ ಮತದಾನಕ್ಕೆ ಕ್ರಮ ವಹಿಸಲಾಗಿದೆ. ಮತದಾರರನ್ನು ಹೊರತುಪಡಿಸಿ ಇತರರಿಗೆ ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅಧಿಕಾರಿಗಳು ಅನಂತಪುರದ ಕನ್ನಡ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರೀಶೀಲಿಸಿದರು.